ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಪ್ರತಿ ನಗರ ಪಾಲಿಕೆಗೆ ರಸ್ತೆ ಗುಂಡಿ ಮುಚ್ಚುವ ತಲಾ ಒಂದು ಯಂತ್ರ ಖರೀದಿಸಬೇಕು ಎಂದು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಬಿಎ ವ್ಯಾಪ್ತಿಯ ವಿವಿಧ ಇಲಾಖೆಗಳೊಂದಿಗೆ ಸೋಮವಾರ ನಡೆದ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಆಯಾ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ವಿವಿಧ ಇಲಾಖೆಗಳು ಕತ್ತರಿಸಿದ ರಸ್ತೆಗಳನ್ನು ಕೂಡಲೇ ದುರಸ್ತಿ ಮಾಡುವ ಸಲುವಾಗಿ ರಸ್ತೆ ಗುಂಡಿ ಮುಚ್ಚುವ ಯಂತ್ರ ಖರೀದಿಸಿ, ಡಾಂಬರೀಕರಣ ಕಾಮಗಾರಿ ನಡೆಸಬೇಕು ಎಂದರು.

ನಗರದಲ್ಲಿ ವಿವಿಧ ಕಾಮಗಾರಿಗಳಿಗಾಗಿ ರಸ್ತೆ ಕತ್ತರಿಸಲು ಮಾರ್ಕ್ಸ್ ಸಾಫ್ಟ್ವೇರ್ ತಂತ್ರಾಂಶದ ಮೂಲಕ ಅನುಮತಿ ಪಡೆದು, ಕಾಮಗಾರಿ ಪೂರ್ಣಗೊಂಡ ಬಳಿಕ ರಸ್ತೆ ದುರಸ್ತಿ ಮಾಡದಿದ್ದಲ್ಲಿ ಪಾಲಿಕೆಯಿಂದಲೇ ದುರಸ್ತಿ ಕಾರ್ಯ ಕೈಗೊಂಡು, ಅದರ ವೆಚ್ಚವನ್ನು ಸಂಬಂಧಪಟ್ಟ ಸಂಸ್ಥೆಗಳಿಂದ ವಸೂಲಿ ಮಾಡಲು ಕ್ರಮವಹಿಸಬೇಕು ಎಂದು ಸೂಚಿಸಿದರು.

ಗೇಲ್ ಸಂಸ್ಥೆ ವತಿಯಿಂದ ಮಾರ್ಕ್ಸ್ ಸಾಫ್ಟ್ವೇರ್ನಲ್ಲಿ ರಸ್ತೆ ಕತ್ತರಿಸಲು ಸಲ್ಲಿಸಿರುವ ಅರ್ಜಿಗಳಿಗೆ ತ್ವರಿತವಾಗಿ ಅನುಮತಿ ನೀಡಬೇಕು. ನಂತರ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವುದರ ಜೊತೆಗೆ, ಕತ್ತರಿಸಿದ ರಸ್ತೆ ಭಾಗವನ್ನು ಸಂಸ್ಥೆಯವರಿಂದಲೇ ದುರಸ್ತಿ ಮಾಡಿಸಬೇಕು ಎಂದರು.

ಹೆಬ್ಬಾಳ ಜಂಕ್ಷನ್ನಲ್ಲಿ ಸುರಂಗ ರಸ್ತೆ, ಕೆಳಸೇತುವೆ, ಮೆಟ್ರೊ ಹಾಗೂ ಉಪ ನಗರ ರೈಲು ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳು ನಡೆಯುತ್ತಿವೆ. ಈ ಕಾರಣದಿಂದ ಸಂಬಂಧಪಟ್ಟ ಇಲಾಖೆಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ, ಸಮಗ್ರ ನಕ್ಷೆಯನ್ನು ಸಿದ್ಧಪಡಿಸಬೇಕು ಎಂದು ಹೇಳಿದರು.

ಕೆ-100 ಜಲಮಾರ್ಗಕ್ಕೆ ಇನ್ನೂ ಕೆಲವು ಪ್ರದೇಶಗಳಿಂದ ಕೊಳಚೆ ನೀರು ಸೇರುತ್ತಿರುವುದು ಗಮನಕ್ಕೆ ಬಂದಿದ್ದು, ಇದನ್ನು ಸಂಪೂರ್ಣವಾಗಿ ತಡೆಯಲು ಜಲಮಂಡಳಿಯವರು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಬಿಡಿಎ ಆಯುಕ್ತ ಮಣಿವಣ್ಣನ್, ನಗರ ಪಾಲಿಕೆಗಳ ಆಯುಕ್ತರಾದ ರಾಜೇಂದ್ರ ಚೋಳನ್, ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಡಿ.ಎಸ್., ಡಾ. ರಾಜೇಂದ್ರ ಕೆ.ವಿ., ಪ್ರಧಾನ ಎಂಜಿನಿಯರ್ ಪ್ರಹ್ಲಾದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-4-439403191

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.