ಬೆಂಗಳೂರು: ರಸ್ತೆ ಮಧ್ಯೆ ನಿಂತು ಗಲಾಟೆ ಮಾಡಿ, ದಂಪತಿಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿದ ದ್ವಿಚಕ್ರ ವಾಹನ ಸವಾರನ ಗುರುತು ಪತ್ತೆ ಮಾಡಲಾಗಿದೆ.

ವಾಹನ ನೋಂದಣಿ ಸಂಖ್ಯೆಯ ಆಧಾರದ ಮೇಲೆ ಆರೋಪಿ ಅರ್ಬಾಜ್ ಖಾನ್ ಎಂಬುದು ಗೊತ್ತಾಗಿದ್ದು, ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಕಾಡುಗೋಡಿ ಠಾಣೆ ಪೊಲೀಸರು ತಿಳಿಸಿದರು.

ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ದಂಪತಿ ಕಾರಿನಲ್ಲಿ ಹೋಗುವಾಗ ಯಾವುದೋ ಕಾರಣಕ್ಕೆ ದ್ವಿಚಕ್ರ ವಾಹನ ಸವಾರನ ಜತೆ ಜಗಳ ಮಾಡಿಕೊಂಡಿದ್ದಾರೆ. ನಂತರ ವಸತಿ ಸಮುಚ್ಚಯವೊಂದರ ಸಿಗ್ನಲ್ ಬಳಿ ಕಾರು ನಿಲ್ಲಿಸಿದ್ದಾಗ ಬೈಕ್ ನಿಲ್ಲಿಸಿ ಬಂದ ಸವಾರ, ರಸ್ತೆ ಮಧ್ಯೆಯಲ್ಲಿಯೇ ದಂಪತಿ ಜತೆ ಗಲಾಟೆ ಮಾಡಿದ್ದಾನೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಆಕ್ರೋಶಗೊಂಡ ಸವಾರ ಮಾರಕಾಸ್ತ್ರ ತೋರಿಸಿ, ಧಮ್ಕಿ ಹಾಕಿದ್ದಾನೆ.

ಈ ದೃಶ್ಯ ಕಾರ್ನಲ್ಲಿದ್ದ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನು ಎ.ರೆಡ್ಡಿ ಎಂಬುವರು ‘ಎಕ್ಸ್’ನಲ್ಲಿ ಹಂಚಿಕೊಂಡು, ನಗರ ಪೊಲೀಸರಿಗೆ ಟ್ಯಾಗ್ ಮಾಡಿದ್ದರು.

ವಿಡಿಯೊ ಹರಿದಾಡಿದ ಬೆನ್ನಲ್ಲೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಬೈಕ್ ಸವಾರನ ಬಂಧನಕ್ಕೆ ಮುಂದಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.