ಬೆಂಗಳೂರು: ದ್ವಿಚಕ್ರ ವಾಹನ ಸವಾರರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಹಣ ಹಾಗೂ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಬಾಲಕರೂ ಸೇರಿ ಐವರನ್ನು ರಾಮಮೂರ್ತಿನಗರ ಹಾಗೂ ಬಾಣಸವಾಡಿ ಠಾಣೆಗಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಾಣಸವಾಡಿ ಉಪ ವಿಭಾಗದ ರಾಮಮೂರ್ತಿನಗರ ಹಾಗೂ ಬಾಣಸವಾಡಿ ಠಾಣೆಯ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದೆ.

ಮಿಥುನ್, ಸುಹಾಸ್ ಹಾಗೂ ಸ್ವೀಫನ್ ರಾಜ್ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಬಾಲಕರನ್ನು ಬಾಲಮಂದಿರಕ್ಕೆ ಒಪ್ಪಿಸಲಾಗಿದೆ.

ಮೇ 17ರ ರಾತ್ರಿ ಕೆಲವೇ ಗಂಟೆಗಳ ಅಂತರದಲ್ಲಿ ಆರೋಪಿತರು ಇಬ್ಬರು ದ್ವಿಚಕ್ರ ವಾಹನ ಸವಾರರ ಮೇಲೆ ಹಲ್ಲೆ ಮಾಡಿ ಸುಲಿಗೆ ಮಾಡಿದ್ದರು.

ರಾತ್ರಿ 12.15ರ ಸುಮಾರಿಗೆ ಬರ್ಖಾತ್ ಅವರು ಔಷಧ ತರಲು ಮೆಡಿಕಲ್ ಶಾಪ್ಗೆ ಬೈಕ್ನಲ್ಲಿ ಹೋಗುವಾಗ ಅಡ್ಡಗಟ್ಟಿದ ಆರೋಪಿಗಳು, ಹಲ್ಲೆ ಮಾಡಿದ್ದರು. ಪ್ರತಿರೋಧ ವ್ಯಕ್ತಪಡಿಸಿದರೂ ಹಲ್ಲೆ ಮುಂದುವರೆಸಿದ್ದರು. ಈ ವೇಳೆ ಬರ್ಖಾತ್ ಬಳಿಯಿದ್ದ ₹600 ಕಸಿದು ಪರಾರಿ ಆಗಿದ್ದರು. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಸವಾರನ ಮೇಲೆ ಹಲ್ಲೆ ಮಾಡಿದ್ದರು.

ಬಂಜಾರ ಲೇಔಟ್ ನಿವಾಸಿ ಧೀರಜ್ ಹೊಸಕೋಟೆ ಬಿರಿಯಾನಿ ತಿನ್ನಲು ಬೈಕ್ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಆರೋಪಿಗಳು ಅಡ್ಡಗಟ್ಟಿ ಡ್ರಾಪ್ ನೀಡುವಂತೆ ಕೇಳಿದ್ದರು. ಆಗ ಧೀರಜ್ ನಿರಾಕರಿಸಿದ್ದರು. ಧೀರಜ್ ವಾಪಸ್ ಬರುವಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು ಎಂದು ಪೊಲೀಸರು ಹೇಳಿದರು.

ಬಂಧಿತ ಆರೋಪಿಗಳ ಪೈಕಿ ಮೂವರು ಬಾಣಸವಾಡಿ ಸುತ್ತಮುತ್ತಲಿನ ನಿವಾಸಿಗಳಾಗಿದ್ದು,ಡೆಲಿವರಿ ಬಾಯ್ಗಳಾಗಿ ಕೆಲಸ ಮಾಡುತ್ತಿದ್ದರು. ಹಣಕ್ಕಾಗಿ ಈ ಕೃತ್ಯ ಎಸಗಿದ್ದಾರೆ. ಆರೋಪಿ ಮಿಥುನ್ ವಿರುದ್ಧ ಈ ಹಿಂದೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು ಎಂದು ಪೊಲೀಸರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-4-1315182604

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.