ಬೆಂಗಳೂರು: ಕೌಟುಂಬಿಕ ವಿಚಾರವಾಗಿ ಪತ್ನಿಯನ್ನು ಕೊಲೆ ಮಾಡಿ ಬಳಿಕ ಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗಂಗೇನಹಳ್ಳಿ ನಿವಾಸಿ ಡೇವಿಡ್ (35) ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮೊದಲು ಸುಮಿತ್ರಾ(30) ಅವರನ್ನು ಕೊಲೆ ಮಾಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಕೊಲೆ ಪ್ರಕರಣ ಮತ್ತು ಅಸ್ವಾಭಾವಿಕ ಸಾವು ಪ್ರಕರಣ(ಯುಡಿಆರ್) ದಾಖಲಿಸಿಕೊಂಡು ತನಿಖೆಕೈಗೊಳ್ಳಲಾಗಿದೆ. ಈ ಘಟನೆ ಯಾವಾಗ ನಡೆದಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಬುಧವಾರ ಮಧ್ಯಾಹ್ನ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಪರಿಶೀಲಿಸಿದ್ದಾಗ ಪ್ರಕರಣ ಗೊತ್ತಾಯಿತು ಎಂದು ಪೊಲೀಸರು ಮಾಹಿತಿ ನೀಡಿದರು. ದಂಪತಿಯು ಆರ್.ಟಿ ನಗರದ ಸಮೀಪದ ಗಂಗೇನಹಳ್ಳಿ ಬಳಿಯಿರುವ ಮನೆಯೊಂದರಲ್ಲಿ ವಾಸವಾಗಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೃತ್ಯ ನಡೆದಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಆರ್.ಟಿ ನಗರ ಠಾಣೆ ಪೊಲೀಸರು ಹಾಗೂ ಸೊಕೊ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಮೃತದೇಹ ಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-4-1465805448

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.