ಬೆಂಗಳೂರು: ಮಾಜಿ ಪ್ರಿಯತಮೆಯ ಭೇಟಿಗೆ ಬಂದು ಆಕೆಯ ಕುಟುಂಬಸ್ಥರಿಂದ ಹಲ್ಲೆಗೊಳಗಾಗಿ ಗುಜರಿ ವ್ಯಾಪಾರಿ ಮೃತಪಟ್ಟ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಮನಗರದಲ್ಲಿ ಗುಜರಿ ವ್ಯಾಪಾರ ಮಾಡಿಕೊಂಡಿದ್ದ ಮೊಹಮ್ಮದ್ ಖಾಸೀಂ (27) ಕೊಲೆಯಾದ ವ್ಯಕ್ತಿ. ಖಾಸೀಂ ಪೋಷಕರು ನೀಡಿದ ದೂರಿನ ಮೇರೆಗೆ ಅರ್ಬಿಯಾ ಕೌಸರ್, ಆಕೆಯ ಪತಿ ಮೊಹಮ್ಮದ್ ಅಕ್ಬರ್, ಸಂಬಂಧಿಕರಾದ ಓವೈಸ್ ಪಾಶಾ ಹಾಗೂ ಮೊಹಮ್ಮದ್ ಚಾಂದ್ ಪಾಶಾ ಎಂಬುವರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಮೊಹಮ್ಮದ್ ಖಾಸೀಂ ಅವರು ಅರ್ಬಿಯಾ ಅವರನ್ನು ಪ್ರೀತಿಸುತ್ತಿದ್ದರು. ಆದರೆ, ಮೂರು ವರ್ಷಗಳ ಹಿಂದೆ ಬೇರೊಬ್ಬ ಯುವಕನ ಜತೆಗೆ ಯುವತಿಯ ಮದುವೆಯಾಗಿತ್ತು. ದಂಪತಿ ಶಾಮಣ್ಣ ಗಾರ್ಡನ್ನಲ್ಲಿ ವಾಸವಾಗಿದ್ದರು.

ಈ ಮಧ್ಯೆ ಖಾಸೀಂ ಅವರು ಮಾಜಿ ಪ್ರೇಯಸಿ ಮನೆಗೆ ಬಂದು ಹೋಗುತ್ತಿದ್ದರು. ಈ ವಿಷಯ ಗೊತ್ತಾಗಿ ಆಕೆಯ ಪತಿ ಹಾಗೂ ಅವರ ಕುಟುಂಬದ ಸದಸ್ಯರು ಗಲಾಟೆ ಮಾಡಿದ್ದರು. ಮೇ 25ರಂದು ಅರ್ಬಿಯಾ ಮನೆಗೆ ಬಂದಿದ್ದ ವೇಳೆ ಹಲ್ಲೆ ನಡೆಸಲಾಗಿತ್ತು. ಹಲ್ಲೆಗೊಳಗಾಗಿದ್ದ ಖಾಸೀಂ ಅವರನ್ನು ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಮೃತನ ಪೋಷಕರು ಬ್ಯಾಟರಾಯನಪುರ ಠಾಣೆಗೆ ದೂರು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.