‘ಎಎಐ ವರದಿ ಬಳಿಕವೇ ಟೆಂಡರ್ ಆಹ್ವಾನಿಸಲಾಗಿದೆ’
‘ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ ಮತ್ತು ಸೋಮನಹಳ್ಳಿ ಹಾಗೂ ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿ ಇರುವ ಮತ್ತೊಂದು ಸ್ಥಳವನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (ಎಎಐ) ಉನ್ನತ ತಂಡ ಪರಿಶೀಲಿಸಿ ತನ್ನ ವರದಿಯನ್ನು ನಮಗೆ ನೀಡಿದೆ. ಇದಾದ ನಂತರವೇ ಈಗ ಟೆಂಡರ್ ಆಹ್ವಾನಿಸಲಾಗಿದೆ’ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.