ಬೆಂಗಳೂರು: ಕಾಮಾಕ್ಷಿಪಾಳ್ಯ ಹಾಗೂ ವೈಟ್ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಎ.ಸಿ ಮೆಕ್ಯಾನಿಕ್ಗಳು ಹಾಗೂ ಯುವತಿ ಮೃತಪಟ್ಟಿದ್ದಾರೆ.

ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟಿ ಹಾಗೂ ಟೆಂಪೊ ಟ್ರಾವೆಲರ್ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಎ.ಸಿ ಮೆಕ್ಯಾನಿಕ್ಗಳಾದ ಸೋಮಣ್ಣ (19), ಪ್ರವೀಣ್ (22) ಮೃತಪಟ್ಟಿದ್ದಾರೆ. ಇಬ್ಬರೂ ಕಲಬುರಗಿ ಜಿಲ್ಲೆಯವರು. ನಗರದ ಉಲ್ಲಾಳ ಉಪನಗರದಲ್ಲಿ ನೆಲಸಿದ್ದರು.

ಬುಧವಾರ ಎ.ಸಿ ರಿಪೇರಿ ಕೆಲಸಕ್ಕೆಂದು ಮನೆಯೊಂದಕ್ಕೆ ತೆರಳಿದ್ದರು. ಕೆಲಸ ಮುಗಿಸಿಕೊಂಡು ಅಂಜನಾನಗರದ ಮೂಲಕ ಈಸ್ಟ್ ವೆಸ್ಟ್ ಕಾಲೇಜು ರಸ್ತೆಯಲ್ಲಿ ಉಲ್ಲಾಳ ಉಪನಗರಕ್ಕೆ ಸ್ಕೂಟಿಯಲ್ಲಿ ಬರುತ್ತಿದ್ದರು. ಎದುರಿಗೆ ವೇಗವಾಗಿ ಬರುತ್ತಿದ್ದ ಟೆಂಪೊ ಟ್ರಾವೆಲರ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಿ.ಟಿ ವಾಹನದ ಚಾಲಕ ಸಹ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು. ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದರು. ಎಸಿ ರಿಪೇರಿ ಕೆಲಸ ಮಾಡುತ್ತಾ ಜೀವನ ನಡೆಸುತ್ತಿದ್ದರು. ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ’ ಎಂದು ಕುಟುಂಬಸ್ಥರು ಕಣ್ಣೀರಾದರು.

ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಯುವತಿಗೆ ಕೊಡತಿ ಗ್ರಾಮದ ಬಳಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿಯ ಹೊಸ ರೋಡ್ ನಿವಾಸಿ ಯಶಸ್ವಿನಿ (27) ಮೃತಪಟ್ಟವರು.

ಡಾಟಾ ಎಂಟ್ರಿ ಆಪರೇಟರ್ ಆಗಿ ಯಶಸ್ವಿನಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಬುಧವಾರ ರಾತ್ರಿ 7ರ ಸುಮಾರಿಗೆ ಮನೆಗೆ ತೆರಳುತ್ತಿದ್ದರು. ಆ ಸಂದರ್ಭದಲ್ಲಿ ವೇಗವಾಗಿ ಬಂದ ವಾಹನವು ಡಿಕ್ಕಿ ಹೊಡೆದಿದೆ. ಚಾಲಕ ವಾಹನವನ್ನು ನಿಲುಗಡೆ ಮಾಡದೇ ತೆರಳಿದ್ದಾನೆ. ವಾಹನ ಚಾಲಕನ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ವೈಟ್ಫೀಲ್ಡ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.