ಬೆಂಗಳೂರು: ಪ್ರತ್ಯೇಕ ಅಪಘಾತದಲ್ಲಿ ಪಾದಚಾರಿ ಹಾಗೂ ಕ್ಯಾಂಟರ್ ಚಾಲಕ ಮೃತಪಟ್ಟಿದ್ದಾರೆ.

ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸ್ಯಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್ನಲ್ಲಿ ನಿಂತಿದ್ದ ಲಾರಿಗೆ, ಹಿಂದಿನಿಂದ ವೇಗವಾಗಿ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ಚಾಲಕ ಅಸುನೀಗಿದ್ದಾರೆ.

ಕೆ.ಆರ್.ಪುರ ನಿವಾಸಿ ವಿಜಯ್ ಕುಮಾರ್ (50) ಮೃತ ಚಾಲಕ.

ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ಸ್ಯಾಟಲೈಟ್ ಬಸ್ ನಿಲ್ದಾಣದ ಎದುರಿನ ಸಿಗ್ನಲ್ನಲ್ಲಿ ಅಪಘಾತ ಸಂಭವಿಸಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ವಿಜಯಕುಮಾರ್ ಅವರು ಕ್ಯಾಂಟರ್ ವಾಹನದಲ್ಲಿ ತರಕಾರಿ ಹಾಗೂ ದಿನ ಬಳಕೆಯ ವಸ್ತುಗಳನ್ನು ತುಂಬಿಕೊಂಡು ಕೆ.ಆರ್.ಮಾರುಕಟ್ಟೆ ಕಡೆಯಿಂದ ಮೈಸೂರು ರಸ್ತೆ ಕಡೆ ಹೋಗುತ್ತಿದ್ದರು. ಔಷಧಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕ, ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿಯಲ್ಲಿ ಸಿಗ್ನಲ್ ಇರುವ ಕಾರಣಕ್ಕೆ ಲಾರಿ ನಿಲುಗಡೆ ಮಾಡಿದ್ದರು. ವೇಗವಾಗಿ ಬರುತ್ತಿದ್ದ ಕ್ಯಾಂಟರ್ ವಾಹನವನ್ನು ಚಾಲಕ ನಿಯಂತ್ರಿಸಲು ಸಾಧ್ಯವಾಗದೇ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವಿಜಯ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.

ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ದಾಟುವಾಗ ವಾಹನ ಡಿಕ್ಕಿ: ಚಿಕ್ಕಬಾಣಾವರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಸರಘಟ್ಟ ಮುಖ್ಯರಸ್ತೆಯ ತರಬನಹಳ್ಳಿ ಬಳಿ ರಸ್ತೆ ದಾಟುವಾಗ ಕ್ಯಾಂಟರ್ ವಾಹನವು ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ.

ಎಚ್.ಆರ್.ರಮೇಶ್ (56) ಮೃತ ವ್ಯಕ್ತಿ.

‘ಹೆಸರಘಟ್ಟ ಮುಖ್ಯರಸ್ತೆಯ ತರಬನಹಳ್ಳಿಯ ಹನುಮಕ್ಕ ಗಿರಿಯಪ್ಪ ಕಲ್ಯಾಣ ಮಂಟಪದ ಬಳಿ ರಮೇಶ್ ಅವರು ರಸ್ತೆ ದಾಟುತ್ತಿದ್ದರು. ಆ ಸಂದರ್ಭದಲ್ಲಿ ವೇಗವಾಗಿ ಬಂದ ಕ್ಯಾಂಟರ್ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ರಮೇಶ್ ಮೃತಪಟ್ಟಿದ್ದಾರೆ’ ಎಂದು ಸಂಚಾರ ವಿಭಾಗದ ಪೊಲೀಸರು ಹೇಳಿದರು.

‘ಕ್ಯಾಂಟರ್ ವಾಹನ ಚಾಲಕನ ಅತೀವೇಗ ಮತ್ತು ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಕಂಡುಬಂದಿದೆ. ರಮೇಶ್ ಅವರ ಪತ್ನಿ ಸಿ.ಅನಿತಾ ಅವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಸಂಚಾರ ಪೊಲೀಸರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-16-902681493

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.