ಬೆಂಗಳೂರು: ಪೂಜೆ ಹಾಗೂ ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇಲೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕಗ್ಗಲಿಪುರದ ಬಳಿಯ ಕುಂಬಳಗೋಡಿನ ಜ್ಯೋತಿಷಿ ಮೋಹನ್ ಕುಮಾರ್ (35) ಎಂಬವರು ದುಷ್ಕೃತ್ಯ ಎಸಗಿದ್ದು, ದೂರು ದಾಖಲಾದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಸಂತ್ರಸ್ತೆಯು ರಾಜಾಜಿನಗರದಲ್ಲಿಬ್ಯೂಟಿಷಿಯನ್ ತರಬೇತಿ ಕೇಂದ್ರ ನಡೆಸುತ್ತಿದ್ದಾರೆ. ಆರೋಪಿಯು, ತನ್ನಸಹೋದರಿಗೆ ಬ್ಯೂಟಿಷಿಯನ್ ತರಬೇತಿಕೊಡಿಸುವ ನೆಪದಲ್ಲಿ ಸಂತ್ರಸ್ತೆಯನ್ನು ಪರಿಚಯ ಮಾಡಿಕೊಂಡು, ಅವರ ಆರ್ಥಿಕ ಸ್ಥಿತಿ ಸುಧಾರಣೆಗೆ ಪೂಜೆ ಮಾಡಿಸಬೇಕೆಂದು ಸುಳ್ಳು ಹೇಳಿ ನಂಬಿಸಿದ್ದ.

ನಂತರ ಪೂಜೆಯ ನೆಪದಲ್ಲಿ 2025ರಲ್ಲಿ ರಾಮನಗರದ ಪಿರಮಿಡ್ ವ್ಯಾಲಿ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮತ್ತೊಮ್ಮೆ ಮೈಸೂರಿನ ಚಾಮುಂಡಿ ಬೆಟ್ಟದ ಬಳಿ ಕರೆದೊಯ್ದು ಕಾರಿನಲ್ಲಿ ದೌರ್ಜನ್ಯ ಎಸಗಿದ್ದಾನೆ’ ಎಂದು ಪೊಲೀಸರು ಹೇಳಿದ್ದಾರೆ.

‘ಆರೋಪಿಯು ಲೈಂಗಿಕ ದೌರ್ಜನ್ಯದ ಸಂಗತಿಯನ್ನು ಯಾರಿಗೂ ತಿಳಿಸದಂತೆ ಸಂತ್ರಸ್ತೆಗೆ ಪ್ರಾಣ ಬೆದರಿಕೆ ಹಾಕಿದ್ದ. ದೀಕ್ಷೆ ನೀಡುವ ನೆಪದಲ್ಲಿ ಫೆಬ್ರುವರಿ 10ರಂದು ಸಂತ್ರಸ್ತೆಯ ಮನೆಗೆ ಹೋಗಿ ಮತ್ತೊಮ್ಮೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ’ ಎಂದರು.

‘ಈ ವಿಚಾರವನ್ನು ಬಹಿರಂಗಪಡಿಸಿದರೆ ಸಂತ್ರಸ್ತೆಯ ಪತಿ ಮತ್ತು ಮಗನ ಮೇಲೆ ವಾಮಾಚಾರ ಮಾಡಿಸಿ ಅವರು ರಕ್ತಕಾರಿ ಸಾಯುವಂತೆ ಮಾಡುವುದಾಗಿ ಹೆದರಿಸಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ. ದೌರ್ಜನ್ಯ ಸಹಿಸದೆ ಸಂತ್ರಸ್ತೆ ದೂರು ಕೊಟ್ಟಿದ್ದಾರೆ. ಈ ಮಧ್ಯೆ ಮೋಹನ್ ಕುಮಾರ್, ಸಂತ್ರಸ್ತೆಯು ಹಣಕ್ಕಾಗಿ ಬೆದರಿಕೆ ಹಾಕಿದ್ದಾರೆ’ ಎಂದು ಆರೋಪಿಸಿ ಕಗ್ಗಲಿಪುರ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-4-1478945442

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.