ಬೆಂಗಳೂರು: ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ರಾಜ್ಯ ಶುಶ್ರೂಷ ಪರಿಷತ್ನ ಕಚೇರಿಯ ರಿಜಿಸ್ಟ್ರಾರ್ ಮಲ್ಲು ಅವರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಗಾಂಧಿನಗರದಲ್ಲಿ ರಾಜ್ಯ ಶುಶ್ರೂಷ ಪರಿಷತ್ ಕಚೇರಿ ಇದೆ. ಅದೇ ಕಚೇರಿಯಲ್ಲಿ ಮಲ್ಲು ಹಾಗೂ ದೂರು ನೀಡಿದ್ದ ಮಹಿಳೆ ಕೆಲಸ ಮಾಡುತ್ತಿದ್ದಾರೆ. ಮಲ್ಲು ಅವರು ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸುವ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಮಾರ್ಚ್ 26ರಂದು ಸಂತ್ರಸ್ತೆ ಉಪ್ಪಾರಪೇಟೆ ಠಾಣೆಗೆ ದೂರು ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

ವಿಚಾರಣೆಗೆ ಬರುವಂತೆ ಮಲ್ಲುಗೆ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ಆರೋಪಿ ವಿಚಾರಣೆಗೆ ಬಂದಿರಲಿಲ್ಲ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಆರೋಪಿಯನ್ನು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು ಜೈಲಿಗೆ ಕಳುಹಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎನ್.ಯತೀಶ್ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.