ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು |ಬುದ್ಧಿಮಾಂದ್ಯ ಬಾಲಕಿಗೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 5 ವರ್ಷ ಶಿಕ್ಷೆ

Published 22 ನವೆಂಬರ್ 2023, 16:06 IST
Last Updated 22 ನವೆಂಬರ್ 2023, 16:06 IST
ಅಕ್ಷರ ಗಾತ್ರ

ಬೆಂಗಳೂರು: ಬುದ್ಧಿಮಾಂದ್ಯ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿ 1ನೇ ತ್ವರಿತ ವಿಶೇಷ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷ ವಿಧಿಸಿ ಆದೇಶಿಸಿದೆ.

ನಾಯಂಡಹಳ್ಳಿ ಚಂದ್ರಶೇಖರ್‌ ಶಿಕ್ಷೆಗೆ ಒಳಗಾದ ಅಪರಾಧಿ.

ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ₹1 ಲಕ್ಷ ಪರಿಹಾರ ನೀಡುವಂತೆಯೂ ನ್ಯಾಯಾಧೀಶೆ ಕೆ.ಎನ್‌.ರೂಪಾ ಆದೇಶಿಸಿದ್ದಾರೆ. ಸರ್ಕಾರಿ ವಕೀಲರಾಗಿ ಪಿ.ಕೃಷ್ಣವೇಣಿ ವಾದ ಮಂಡಿಸಿದ್ದರು.

2022ರ ಏಪ್ರಿಲ್‌ 14ರಂದು ಸಂಜೆ ಬಾಲಕಿ ಮನೆಗೆ ತೆರಳಿದ್ದ ಅಪರಾಧಿ, ಪ್ರೀತಿಸುವಂತೆ ಬಲವಂತ ಮಾಡಿದ್ದ. ಅದೇ ವೇಳೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಬಾಲಕಿಯ ತಾಯಿ ಹುಳಿಮಾವು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT