ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Shakti Scheme | ಪ್ರಯಾಣಿಕರ ಜತೆ ಸೌಜನ್ಯದಿಂದ ವರ್ತಿಸಿ: ಕೆಎಸ್‌ಆರ್‌ಟಿಸಿ ಸೂಚನೆ

Published 23 ಜೂನ್ 2023, 7:41 IST
Last Updated 23 ಜೂನ್ 2023, 7:41 IST
ಅಕ್ಷರ ಗಾತ್ರ

ಬೆಂಗಳೂರು: ಬಸ್ ಪ್ರಯಾಣಿಕರ ಜೊತೆಗೆ ಸೌಜನ್ಯದಿಂದ ವರ್ತಿಸಬೇಕು. ಇಲ್ಲದೇ ಇದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು, ಬಸ್‌ಗಳ ಚಾಲಕರು ಮತ್ತು ನಿರ್ವಾಹಕರಿಗೆ ಎಚ್ಚರಿಕೆ ನೀಡಿದ್ದಾರೆ.

ಮಹಿಳೆಯರಿಗೆ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ‘ಶಕ್ತಿ’ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಇದರ ಅನುಷ್ಠಾನವೂ ಯಶಸ್ವಿಯಾಗಿ ನಡೆಯುತ್ತಿದೆ. ಆದರೆ, ಕೆಲವೊಂದು ಘಟನೆಗಳು ಈ ಮಹತ್ವದ ಯೋಜನೆಯ ಬಗ್ಗೆ ತಪ್ಪು ಅಭಿಪ್ರಾಯ ಬರಲು ಕಾರಣವಾಗುತ್ತಿವೆ. ನಿಗದಿತ ಬಸ್‌ನಿಲ್ದಾಣ, ನಿಲುಗಡೆ ಸ್ಥಳಗಳಲ್ಲಿ ಬಸ್‌ ನಿಲ್ಲಿಸದೇ ಇರುವುದು, ಉಚಿತವಾಗಿ ಪ್ರಯಾಣಿಸುವವರ ಬಗ್ಗೆ ಅಪಹಾಸ್ಯ ಮಾಡುವುದು, ಅಗೌರದಿಂದ ನಡೆದುಕೊಳ್ಳುವುದು ಮುಂತಾದ ಪ್ರಕರಣಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ. 

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಸಿಬ್ಬಂದಿಗೆ ಸೂಕ್ತ ನಿರ್ದೇಶನ ನೀಡುವಂತೆ ಸೂಚಿಸಿದ್ದರು.

ಅದನ್ನು ಆಧರಿಸಿ ಸುತ್ತೋಲೆ ಹೊರಡಿಸಲಾಗಿದೆ. ‘ಪ್ರಯಾಣಿಕರನ್ನು ನಿಗದಿತ ಸ್ಥಳಗಳಲ್ಲಿ ಹತ್ತಿಸುವುದು, ಇಳಿಸುವುದು ಮಾಡಬೇಕು. ಸೌಜನ್ಯದಿಂದ ವರ್ತಿಸಬೇಕು. ಅಗೌರವದಿಂದ ವರ್ತಿಸುವ ಪ್ರಕರಣಗಳು ನಡೆದರೆ ಶಿಸ್ತುಕ್ರಮ ಅನಿವಾರ್ಯ’ ಎಂದು ಎಚ್ಚರಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT