ಬೆಂಗಳೂರು: ಹಬ್ ಆ್ಯಂಡ್ ಸ್ಪೋಕ್ ಮಾದರಿಯಲ್ಲಿ 6,200 ಸರ್ಕಾರಿ ಶಾಲೆಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (ಎಐಡಿಎಸ್ಒ) ಬೆಂಗಳೂರು ನಗರ ಘಟಕದ ನೇತೃತ್ವದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಮುಂಭಾಗದಲ್ಲಿ ಭಾನುವಾರ ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಯಿತು.

ನಂತರ ಮಾತನಾಡಿದ ಎಐಡಿಎಸ್ಒ ಜಿಲ್ಲಾ ಘಟಕದ ಅಧ್ಯಕ್ಷೆ ಅಪೂರ್ವ ಸಿ.ಎಂ., ‘10ಕ್ಕಿಂತ ಕಡಿಮೆ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳನ್ನು ಮುಚ್ಚುವ ಸರ್ಕಾರದ ನಿರ್ಧಾರ ಖಂಡನೀಯ. ಸರ್ಕಾರಿ ಶಾಲೆಗಳನ್ನು ಮುಚ್ಚದಂತೆ ರಾಜ್ಯದಾದ್ಯಂತ 50 ಲಕ್ಷ ಸಹಿಗಳನ್ನು ಸಂಗ್ರಹಿಸುವ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ’ ಎಂದು ತಿಳಿಸಿದರು.

‘ಸರ್ಕಾರಿ ಶಾಲೆಗಳನ್ನು ಮುಚ್ಚುವ ಸರ್ಕಾರದ ನಿರ್ಧಾರವು ವಿದ್ಯಾರ್ಥಿಗಳು, ಹಿಂದುಳಿದ ಕುಟುಂಬಗಳ ಮಕ್ಕಳು ಮತ್ತು ವಿಶೇಷವಾಗಿ ಬಾಲಕಿಯರ ಮೇಲೆ ಪರಿಣಾಮ ಬೀರುತ್ತದೆ. ಇದು ಅವರ ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುತ್ತದೆ. ಮುಚ್ಚುವ ಬದಲು, ಸರ್ಕಾರವು ಈ ಶಾಲೆಗಳಿಗೆ ಹೆಚ್ಚು ಅನುದಾನ ನೀಡಿ, ಅಗತ್ಯ ಮೂಲಸೌಕರ್ಯ ಒದಗಿಸಬೇಕು. ಶಿಕ್ಷಕರ ನೇಮಕಾತಿಗೆ ಆದ್ಯತೆ ನೀಡುವ ಮೂಲಕ ಅವುಗಳನ್ನು ಬಲಪಡಿಸಬೇಕು’ ಎಂದು ಒತ್ತಾಯಿಸಿದರು.

ಎಐಡಿಎಸ್ಒ ಜಿಲ್ಲಾ ಘಟಕದ ಕಾರ್ಯದರ್ಶಿ ಕಲ್ಯಾಣ್ ಕುಮಾರ್ ವಿ. ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.