ವಿದ್ಯಾರ್ಥಿಗಳಿಬ್ಬರಿಗೆ ಬೀದಿ ನಾಯಿ ಕಡಿತ
ಜ್ಞಾನಭಾರತಿ ಆವರಣದೊಳಗಿರುವ ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‌ನ ಇಬ್ಬರು ವಿದ್ಯಾರ್ಥಿಗಳ ಮೇಲೆ ಬೀದಿ ನಾಯಿಗಳ ಗುಂಪು ದಾಳಿ ಮಾಡಿ ಕಚ್ಚಿದ್ದು ಒಬ್ಬ ವಿದ್ಯಾರ್ಥಿಗೆ ತೀವ್ರ ಗಾಯಗಳಾಗಿವೆ. ‘ಮಂಗಳವಾರ ಬೆಳಗಿನ ವಾಯುವಿಹಾರದ ಸಂದರ್ಭದಲ್ಲಿ ಬೀದಿ ನಾಯಿಗಳು ದಾಳಿ ಮಾಡಿದ್ದರಿಂದ ವಿದ್ಯಾರ್ಥಿಯೊಬ್ಬರಿಗೆ 10 ಕಡೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಮಂಗಳವಾರ ಸಂಜೆಯವರೆಗೂ ವಿದ್ಯಾರ್ಥಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದೆ’ ಎಂದು ಬಿಬಿಎಂಪಿ ಪಶುಸಂಗೋಪನೆ ವಿಭಾಗದ ಸಹಾಯಕ ನಿರ್ದೇಶಕರು ತಿಳಿಸಿದರು. ‘ಮತ್ತೊಬ್ಬ ವಿದ್ಯಾರ್ಥಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಮಂಗಳವಾರ ಸಂಜೆ ವೇಳೆಗೆ ಇಬ್ಬರೂ ಚೇತರಿಸಿಕೊಂಡಿದ್ದು ಆರೋಗ್ಯ ಸ್ಥಿರವಾಗಿದೆ’ ಎಂದು ಮಾಹಿತಿ ನೀಡಿದರು.