ಬೆಂಗಳೂರು: ವಿಧಾನ ಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಶೇ 100ರಷ್ಟು ಅರ್ಹ ಮತದಾರರ ಸೇರ್ಪಡೆ ಮಾಡಲು, ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಬೇಕೆಂಬ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಎನ್.ಲಕ್ಷ್ಮಣ ಸ್ವಾಮಿ ಸಲ್ಲಿಸಿರುವ ಈ ಕುರಿತ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಆದಿನಾರಾಯಣ ಅವರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಕೇಂದ್ರ ಚುನಾವಣಾ ಆಯೋಗ, ಮುಖ್ಯ ಚುನಾವಣಾ ಅಧಿಕಾರಿ ಹಾಗೂ ಮತಪಟ್ಟಿ ನೋಂದಣಿ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ಕೇಂದ್ರ ಚುನಾವಣಾ ಆಯೋಗದ ಪರ ಎಸ್.ಆರ್.ದೊಡವಾಡ ಹಾಜರಿದ್ದರು.

ಕೋರಿಕೆ ಏನು?: ‘ಪ್ರಕಟಿತ ಪಟ್ಟಿ ಯಲ್ಲಿನ ಕಾಲಂ ನಂ 4ರಲ್ಲಿ ಮತದಾರರಾದ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಗಳ ಪೂರ್ಣ ವಿಳಾಸ ನಮೂದಾಗುವಂತೆ ನೋಡಿಕೊಳ್ಳಬೇಕು. ಈ ಕುರಿತು ಹೆಚ್ಚುವರಿ ಪಟ್ಟಿ ಬಿಡುಗಡೆ ಮಾಡಲು ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-4-618377120

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.