ಶನಿವಾರ, ಡಿಸೆಂಬರ್ 5, 2020
24 °C
ಈಶ ಪ್ರತಿಷ್ಠಾನ ಸಂಸ್ಥಾಪಕ ಜಗ್ಗಿ ವಾಸುದೇವ್‌ ಸಲಹೆ

ಲಸಿಕೆ ನೀಡಿಕೆಯಲ್ಲಿ ಭ್ರಷ್ಟಾಚಾರ ನುಸುಳದಿರಲಿ: ಜಗ್ಗಿ ವಾಸುದೇವ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕೋವಿಡ್‌ ಲಸಿಕೆ ಮಾರುಕಟ್ಟೆಗೆ ಬಂದಾಗ ಅದು ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುವ ಸಾಧ್ಯತೆಗಳಿವೆ. ಇದಕ್ಕೆ ಸರ್ಕಾರ ಅವಕಾಶ ನೀಡಬಾರದು’ ಎಂದು ಈಶ ಪ್ರತಿಷ್ಠಾನದ ಸಂಸ್ಥಾಪಕ ಜಗ್ಗಿ ವಾಸುದೇವ್‌ ಶನಿವಾರ ಸಲಹೆ ನೀಡಿದರು.

ನಗರದಲ್ಲಿ ನಡೆದ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ (ಬಿಟಿಎಸ್‌), ‘ಸಮಾಜದ ಸ್ವಾಸ್ಥ್ಯಕ್ಕಾಗಿ ತಂತ್ರಜ್ಞಾನಗಳಲ್ಲಿ ಹೂಡಿಕೆ’ ಕುರಿತ ಗೋಷ್ಠಿಯಲ್ಲಿ ಅವರು, ‘ಲಸಿಕೆಯ ಸಾಧಕ-ಬಾಧಕಗಳ ಬಗ್ಗೆ ವಿಜ್ಞಾನ ಲೋಕ ಖಾತ್ರಿಪಡಿಸಿಕೊಳ್ಳಬೇಕು. ಜತೆಗೆ ವಿಶ್ವ ಆರೋಗ್ಯ ಸಂಸ್ಥೆಯೂ ಯಾವ ಲಸಿಕೆ ಕಡ್ಡಾಯ, ಯಾವುದು ಐಚ್ಛಿಕ ಎಂದು ಸ್ಪಷ್ಟಪಡಿಸಬೇಕು’ ಎಂದರು.

‘ಯಾರು ಎಲ್ಲಿಂದ ಬೇಕಾದರೂ ಕೆಲಸ ಮಾಡಬಹುದು ಎಂಬುದನ್ನು ಕೋವಿಡ್ ಸನ್ನಿವೇಶ ದೃಢಪಡಿಸಿದೆ. ಇದನ್ನು ಅರ್ಥಮಾಡಿಕೊಂಡರೆ ಕಂಪನಿಗಳು ಮೂಲಸೌಕರ್ಯಕ್ಕಾಗಿ ಮಾಡುವ ಅನಗತ್ಯ ವೆಚ್ಚಗಳನ್ನು ಗಣನೀಯವಾಗಿ ಕಡಿಮೆ ಮಾಡಬಹುದು. ಜೊತೆಗೆ ತಮ್ಮ ನಿರ್ವಹಣಾ ಹೊರೆಯನ್ನೂ ಕಡಿಮೆ ಮಾಡಿಕೊಳ್ಳಬಹುದು’ ಎಂದರು.

‘ಕಂಪನಿಗಳು ಮನುಷ್ಯರನ್ನು ಸಂಪನ್ಮೂಲ ಎಂದು ನೋಡುವ ಧೋರಣೆ ಬದಲಾಗಬೇಕು’ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು