ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಟೆಕ್ ಸಮಿಟ್ ಮುಂದೂಡಿಕೆ

Last Updated 20 ಮೇ 2020, 16:49 IST
ಅಕ್ಷರ ಗಾತ್ರ

ಬೆಂಗಳೂರು: ಪ್ರತಿಷ್ಠಿತ ಬೆಂಗಳೂರು ಟೆಕ್ ಸಮಿಟ್ (ಬಿಟಿಎಸ್) ನವೆಂಬರ್ 19ರಿಂದ 21ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಐಟಿ-ಬಿಟಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಹಿಂದೆ ಸೆಪ್ಟೆಂಬರ್ 21ರಿಂದ 23ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಕೋವಿಡ್-19 ಕಾರಣಕ್ಕೆ ದೇಶ-ವಿದೇಶಗಳಿಂದ ಐಟಿ ಪ್ರತಿನಿಧಿಗಳು ಬರುವುದು ಕಷ್ಟ ಆಗುತ್ತದೆ ಎನ್ನುವಕಾರಣಕ್ಕೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಈ ಬಾರಿಯ ಟೆಕ್ ಸಮಿಟ್ ವಿಶೇಷವಾಗಿರುತ್ತದೆ. ವೈಯಕ್ತಿಕ ಅಂತರ ಸೇರಿದಂತೆ ಹಲವು ವಿಷಯಗಳಲ್ಲಿ ಮುಂಜಾಗ್ರತೆ ವಹಿಸಲಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ಜನರು ಎದುರಿಸಿದ ಸಮಸ್ಯೆಗಳು ಮತ್ತು ಅದಕ್ಕೆ ತಂತ್ರಜ್ಞಾನ ಒದಗಿಸಿದ ಉಪಾಯಗಳ ಬಗ್ಗೆಯೂ ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ. ಹೊಸ ಹೊಸ ತಂತ್ರಜ್ಞಾನಗಳ ಬಗ್ಗೆಯೂ ತಜ್ಞರು ಉಪನ್ಯಾಸ ನೀಡಲಿದ್ದಾರೆ. ಐಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ, ಉಪ ಮುಖ್ಯಮಂತ್ರಿಯವರ ಕಾರ್ಯದರ್ಶಿ ಪಿ.ಪ್ರದೀಪ್, ಐಟಿ ನಿರ್ದೇಶಕಿ ಮೀನಾ ನಾಗರಾಜ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT