ಬೆಂಗಳೂರು: ಥಣಿಸಂದ್ರ ಮುಖ್ಯರಸ್ತೆಯ ‘ನಿಕೂ ಹೋಮ್ಸ್–1 ಅಪಾರ್ಟ್ಮೆಂಟ್’ನಲ್ಲಿ ನೆಲಸಿದ್ದ ತೆಲಂಗಾಣದ ಟೆಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಭಾನು ಚಂದರ್ರೆಡ್ಡಿ (32) ಅವರ ಮೃತದೇಹವು ಫ್ಲ್ಯಾಟ್ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ ಪತ್ನಿ ಬೀಬಿ ಶಾಜಿಯಾ ಸಿರಾಜ್(31) ಅವರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

‘ಕೃತ್ಯ ನಡೆದ ಸ್ಥಳದಲ್ಲಿ ಯಾವುದೇ ಮರಣಪತ್ರ ಸಿಕ್ಕಿಲ್ಲ. ಮನೆಯಲ್ಲಿ ಪತಿ ನೇಣು ಹಾಕಿಕೊಂಡ ಬಳಿಕ, ಪತ್ನಿ ಶಾಜಿಯಾ ಅವರು 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ದಂಪತಿ: ‘ತೆಲಂಗಾಣದ ಸಿದ್ದಿಪೇಟೆಯ ಭಾನು ಚಂದರ್ರೆಡ್ಡಿ ಹಾಗೂ ಬೀಬಿ ಶಾಜಿಯಾ ಸಿರಾಜ್ ದಂಪತಿ ನಗರದ ಸಾಫ್ಟ್ವೇರ್ ಕಂಪನಿಗಳಲ್ಲಿ ಟೆಕಿಗಳಾಗಿ ಕೆಲಸ ಮಾಡುತ್ತಿದ್ದರು. ದಂಪತಿಯ ನಡುವೆ ಕೌಟುಂಬಿಕ ಕಲಹ ಇತ್ತು. ಇತ್ತೀಚೆಗೆ ಇಬ್ಬರ ನಡುವೆ ಜಗಳ ನಡೆದಿದ್ದು, ಮಾನಸಿಕ ಒತ್ತಡ ಹಾಗೂ ಖಿನ್ನತೆಯಿಂದ ಬಳಲುತ್ತಿದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಮನೆಯಲ್ಲಿ ಪತ್ನಿ ಇಲ್ಲದ ವೇಳೆ ಭಾನು ಚಂದ್ರರ್ರೆಡ್ಡಿ ಅವರು ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫ್ಲ್ಯಾಟ್ಗೆ ಬಂದಾಗ ಒಳಗಿನಿಂದ ಬಾಗಿಲು ಹಾಕಿಕೊಂಡಿರುವುದನ್ನು ಶಾಜಿಯಾ ಸಿರಾಜ್ ಅವರು ಗಮನಿಸಿದ್ದರು. ಪತಿಗೆ ಹಲವು ಬಾರಿ ಕರೆ ಮಾಡಿದ್ದರೂ ಪ್ರತಿಕ್ರಿಯೆ ನೀಡಿರಲಿಲ್ಲ. ಬಾಗಿಲು ತೆರೆಯಲು ಅಕ್ಕಪಕ್ಕದ ಫ್ಲ್ಯಾಟ್ನವರ ಬಳಿ ಮನವಿ ಮಾಡಿದ್ದರು. ಬಾಗಿಲು ಒಡೆದು ನೋಡಿದಾಗ ಪತಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಇತ್ತು. ಆಘಾತಕ್ಕೆ ಒಳಗಾದ ಶಾಜಿಯಾ ಅವರು ಅದೇ ಅಪಾರ್ಟ್ಮೆಂಟ್ನ 17ನೇ ಮಹಡಿಗೆ ತೆರಳಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ ಎಂದು ಪೊಲೀಸರು ಹೇಳಿದರು.

‘ಕುಟುಂಬದವರ ದೂರಿನ ಆಧಾರದ ಮೇಲೆ ಎರಡು ಪ್ರತ್ಯೇಕ ಅಸಹಜ ಸಾವು ಪ್ರಕರಣಗಳನ್ನು ದಾಖಲಿಸಲಾಗಿದೆ. ದಂಪತಿಯ ಸಾವಿಗೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ. ವರದಿ ಬಂದ ಮೇಲೆ ದಂಪತಿ ಸಾವಿಗೆ ಕಾರಣ ಪತ್ತೆ ಆಗಲಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.