ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲ ಮಹಿಳೆಗೆ ಒದ್ದಿದ್ದ ಎಎಸ್ಐ ನಾರಾಯಣ ಅಮಾನತು

Last Updated 30 ಜನವರಿ 2022, 10:42 IST
ಅಕ್ಷರ ಗಾತ್ರ

ಬೆಂಗಳೂರು: ವಾಹನಗಳ ಟೋಯಿಂಗ್ ಮಾಡುತ್ತಿದ್ದ ಪೊಲೀಸ್‌ಗೆ ಕಲ್ಲಿನಿಂದ ಹೊಡೆದರೆಂಬ ಕಾರಣಕ್ಕೆ, ಅಂಗವಿಕಲ‌ ಮಹಿಳೆಗೆ ಬೂಟುಗಾಲಿನಿಂದ ಒದ್ದಿದ್ದ ಎಎಸ್ಐ ನಾರಾಯಣ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಘಟನೆ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿ ಆಧರಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತನಿಖೆಗೆ ಸೂಚನೆ ನೀಡಿದ್ದರು.
ಪ್ರಾಥಮಿಕ ತನಿಖೆ ‌ನಡೆಸಿದ‌ ಸಂಚಾರ ವಿಭಾಗದ ಜಂಟಿ‌ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಅವರು, ಹಲಸೂರು ಗೇಟ್ ಸಂಚಾರ ಠಾಣೆ ಎಎಸ್ಐ ನಾರಾಯಣ ಅವರನ್ನು ‌ಅಮಾನತು ಮಾಡಿದ್ದಾರೆ.

'ಎಎಸ್ಐ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು‌ ಮಾಡಲಾಗಿದೆ. ಅವರ ಮೇಲಿನ ಆರೋಪದ ಬಗ್ಗೆ ಇಲಾಖಾ ವಿಚಾರಣೆ ನಡೆಯಲಿದೆ' ಎಂದು ರವಿಕಾಂತೇಗೌಡ ತಿಳಿಸಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದ ಗೃಹ‌ ಸಚಿವ‌ ಆರಗ ಜ್ಞಾನೇಂದ್ರ, 'ಒಬ್ಬ ಅಮಾಯಕ ಮಹಿಳೆಯ ಮೇಲೆಪೊಲೀಸ್ ಅಧಿಕಾರಿಯೊಬ್ಬರು ಅವಾಚ್ಯ ಮಾತುಗಳನ್ನು ಬಳಸಿದ್ದಲ್ಲದೆ, ಹಲ್ಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ‌ಸೂಚಿಸಲಾಗಿತ್ತು. ಯಾರೇ ಆದರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು, ಇದಕ್ಕೆ ಪೊಲೀಸರೂ ಹೊರತಾಗಿಲ್ಲ' ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT