ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ, ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕೆಎಸ್ಆರ್ಟಿಸಿ) ‘ನೌಕರರ ಟ್ರೇಡ್ ಯೂನಿಯನ್ ಜಂಟಿ ಕ್ರಿಯಾ ಸಮಿತಿ’ ಮೇ 20ರಿಂದ ಕರೆದಿದ್ದ ಮುಷ್ಕರವನ್ನು ನಿರ್ಬಂಧಿಸಿ ನೀಡಲಾಗಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಇದೇ 23ರವರೆಗೆ ವಿಸ್ತರಿಸಿದೆ.

ಮುಷ್ಕರವನ್ನು ಪ್ರಶ್ನಿಸಿ ಮನೆ ಕೆಲಸ ಮಾಡುತ್ತಿರುವ ಸುದ್ದುಗುಂಟೆ ಪಾಳ್ಯದ ಸಿ.ವೇದಾವತಿ ಹಾಗೂ ಕಟ್ಟಡ ಕಾರ್ಮಿಕ ಎಚ್.ವಿ.ಶ್ರೀಧರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಮುಷ್ಕರ ನಡೆಸಲು ಕಾನೂನಿನಲ್ಲಿ ನಿಮಗೆ ಹಕ್ಕು ಎಲ್ಲಿದೆ’ ಎಂದು ಜಂಟಿ ಕ್ರಿಯಾ ಸಮಿತಿಯನ್ನು ಪ್ರಶ್ನಿಸಿದ ನ್ಯಾಯಪೀಠ, ‘ಸಾರಿಗೆಯು ಸಾರ್ವಜನಿಕರ ಪಾಲಿನ ಒಂದು ಅತ್ಯಗತ್ಯ ಸೇವೆ. ಮುಷ್ಕರ ನಡೆಸಬಾರದು ಎಂದು ಈಗಾಗಲೇ ಹೈಕೋರ್ಟ್ ಸೂಚಿಸಿದೆ. ಸರ್ಕಾರದ ಜೊತೆಗೆ ಸಮಾಲೋಚನೆ ನಡೆಸುವಂತೆ ನಿರ್ದೇಶಿಸಲಾಗಿದೆ. ಅಲ್ಲಿ ನೀವು ನಿಮ್ಮ ಹಕ್ಕುಗಳ ಕುರಿತಂತೆ ಸರ್ಕಾರದ ಜೊತೆ ಸಮಾಲೋಚನೆ ನಡೆಸಬಹುದಲ್ಲಾ’ ಎಂದು ಹೇಳಿತು.

ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಜಂಟಿ ಕ್ರಿಯಾ ಸಮಿತಿಗೆ ಎರಡು ವಾರ ಕಾಲಾವಕಾಶ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ 23ಕ್ಕೆ ಮುಂದೂಡಿತು. ಅಂತೆಯೇ, ಈ ಮಧ್ಯೆ ಮುಷ್ಕರ ನಡೆಸಬಾರದು ಎಂದು ಮೌಖಿಕವಾಗಿ ಸೂಚಿಸಿತಲ್ಲದೆ, ಮುಷ್ಕರ ನಡೆಸುವುದಕ್ಕೆ ನಿರ್ಬಂಧ ಹೇರಿ ಮೇ 19ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಮುಂದಿನ ವಿಚಾರಣೆವರೆಗೆ ವಿಸ್ತರಿಸಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-51-1311525116

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.