ಬೆಂಗಳೂರು: ಸಾರಿಗೆ ನೌಕರರ ಸಂಘಟನೆಗಳು ಹಾಗೂ ಆಡಳಿತ ಮಂಡಳಿಯ ಪ್ರತಿನಿಧಿಗಳ ನಡುವೆ ಸೋಮವಾರ ನಡೆದ ರಾಜಿ ಸಂಧಾನ ಸಭೆಯಲ್ಲಿ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಾಗಲಿಲ್ಲ. ಹೀಗಾಗಿ ಜೂನ್ 10ಕ್ಕೆ ಮತ್ತೆ ಸಭೆ ನಡೆಯಲಿದೆ.

ಕಾರ್ಮಿಕ ಆಯುಕ್ತರು ಮೇ 18ಕ್ಕೆ ರಾಜೀ ಸಂಧಾನ ಸಭೆ ಕರೆದಿದ್ದರು. ಆ ಸಭೆಯಲ್ಲಿ ಯಾವುದೇ ತೀರ್ಮಾನವಾಗದ ಕಾರಣ ಮೇ 25ಕ್ಕೆ ಮುಂದೂಡಲಾಗಿತ್ತು. ಇದೀಗ ಎರಡನೇ ಬಾರಿಯೂ ತೀರ್ಮಾನಕ್ಕೆ ಬರಲು ಆಗಿಲ್ಲ.

ಕೆಎಸ್ಆರ್ಟಿಸಿ, ಬಿಎಂಟಿಸಿ, ಕೆಕೆಆರ್ಟಿಸಿ, ಎನ್ಡಬ್ಲ್ಯುಆರ್ಟಿಸಿಯ ವ್ಯವಸ್ಥಾಪಕ ನಿರ್ದೇಶಕರು ಆಡಳಿತ ವರ್ಗದ ಪರವಾಗಿ ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿಯ ಮುಖಂಡರು ನೌಕರರ ಪರವಾಗಿ ಪಾಲ್ಗೊಂಡಿದ್ದರು.

‘2024ರ ಜನವರಿ 1ರಿಂದಲೇ ವೇತನ ಹೆಚ್ಚಳ ಅನ್ವಯವಾಗಬೇಕು ಎಂಬ ಬೇಡಿಕೆಯಲ್ಲಿ ಬದಲಾವಣೆ ಇಲ್ಲ. ಪ್ರತಿ ನಾಲ್ಕು ವರ್ಷಕ್ಕೊಮ್ಮೆ ಆಗಬೇಕಾದ ವೇತನ ಪರಿಷ್ಕರಣೆಯ ಪ್ರಕ್ರಿಯೆಯನ್ನು ಬದಲಾಯಿಸಬಾರದು. ಉಳಿದಂತೆ ಶೇ 25ರಷ್ಟು ವೇತನ ಹೆಚ್ಚಳ ಮಾಡಬೇಕು ಎಂಬ ಬೇಡಿಕೆಯ ಬಗ್ಗೆ ಚರ್ಚೆ ಮಾಡಲು ಸಿದ್ಧ. ಶೇ 12.5ರಷ್ಟು ವೇತನ ಹೆಚ್ಚಳ ಮಾಡಿರುವುದನ್ನು ಇನ್ನಷ್ಟು ಹೆಚ್ಚಿಸಬೇಕು. ಹಿಂಬಾಕಿ ಬಗ್ಗೆ ಮಾತುಕತೆಗೆ ತಯಾರಿದ್ದೇವೆ’ ಎಂದು ಕಾರ್ಮಿಕ ಸಂಘಟನೆಗಳ ಮುಖಂಡರು ತಿಳಿಸಿದರು.

‘ನಿಮ್ಮ ಬೇಡಿಕೆಗಳ ಬಗ್ಗೆ ನಿಗಮಗಳ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ ನಡೆಸಿ ಸರ್ಕಾರಕ್ಕೆ ಕಳುಹಿಸಲಾಗುವುದು’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.ಎರಡೂ ಕಡೆಯ ವಾದಗಳನ್ನು ಆಲಿಸಿದ ಆಯುಕ್ತರು ರಾಜಿ ಸಂಧಾನ ಸಭೆಯನ್ನು ಮುಂದೂಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-51-1850020027

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.