ಬೆಂಗಳೂರು: ‘ಶಾಲೆಗೆ ಅಡ್ಡಿಯಾಗುತ್ತಿದೆ ಎಂಬ ಕಾರಣ ನೀಡಿ ಅರಣ್ಯ ಇಲಾಖೆಯೇ 100 ವರ್ಷಕ್ಕಿಂತ ಹಳೆಯ ಹುಣಸೆ ಮರ ತೆರವುಗೊಳಿಸಿದ್ದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಹಿತರಕ್ಷಣಾ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ದಕ್ಷಿಣ ತಾಲ್ಲೂಕು ಕನಕಪುರ ರಸ್ತೆಯ ಕಗ್ಗಲಿಪುರ ವಲಯ ಅರಣ್ಯ ವ್ಯಾಪ್ತಿಯ ಗಾಂಧಿನಗರ ಗ್ರಾಮದಲ್ಲಿ ಮಂಗಳವಾರ ಮರ ಕಡಿಯುವ ವಿಚಾರ ತಿಳಿದು ಸಂಘದ ಪ್ರಮುಖರು ಅಲ್ಲಿಗೆ ತೆರಳಿ ಕಡಿಯದಂತೆ ತಡೆಯುವ ಪ್ರಯತ್ನ ಮಾಡಿದರು.

ಸಂಘದ ಪ್ರಮುಖರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದರು. ಆದರೆ, ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದೆ ಎನ್ನುವ ಮನವಿ ಬಂದಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಸಮಜಾಯಿಷಿ ನೀಡಿದರು. ಇದನ್ನು ಒಪ್ಪದೇ ಇದ್ದಾಗ ಮರವನ್ನು ಕಡಿಯಲಾಯಿತು.

‘ಹಸಿರು ಮರ ಕಡಿಯುವ ಪ್ರಯತ್ನ ಇದು ಮೊದಲೇನಲ್ಲ. ಅರಣ್ಯ ಇಲಾಖೆ ಅಧಿಕಾರಿಗಳು ಜೀವಂತ ಮರಗಳಿಗೆ ಕೊಡಲಿ ಹಾಕಲು ಹಲವು ಬಾರಿ ಪ್ರಯತ್ನ ನಡೆಸಿದ್ದು, ತಕರಾರು ಅರ್ಜಿ ನೀಡಿ ತಡೆದಿದ್ದೆವು. ವನರಕ್ಷಕರ ಹೆಸರಲ್ಲಿ ಇಲಾಖೆಯವರೇ ಮರಗಳಿಗೆ ಕೊಡಲಿ ಹಾಕುತ್ತಿರುವುದು ನೋವು ಉಂಟು ಮಾಡಿದೆ. ಇದರ ವಿರುದ್ದ ಹೋರಾಟ ನಡೆಸುತ್ತೇವೆ’ ಎಂದು ಸಂಘದ ಅಧ್ಯಕ್ಷ ನದೀಮ್ ಪಾಷ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-4-2118678468

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.