ಬೆಂಗಳೂರು: ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸುರಂಗ ರಸ್ತೆ ಯೋಜನೆಯ ಟೆಂಡರ್ ಸಲ್ಲಿಕೆಗೆ ಕಾಲಾವಧಿಯನ್ನು ಒಂದು ತಿಂಗಳು ವಿಸ್ತರಿಸಲಾಗಿದೆ.

ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ-ಸ್ಮೈಲ್) 16.74 ಕಿ.ಮೀ. ಸುರಂಗ ರಸ್ತೆಗೆ ಟೆಂಡರ್ ಆಹ್ವಾನಿಸಿದ್ದು, ಪ್ರಕ್ರಿಯೆ ಶುರುವಾಗಿದೆ. ಇದರ ನಡುವೆಯೇ ಈ ಯೋಜನೆಯ ಬಿಡ್ ಪಡೆಯಲು ಬಯಸುವ ಸಂಸ್ಥೆಗಳಿಗೆ ಭೂ ತಾಂತ್ರಿಕ ಸಮೀಕ್ಷೆ ಕೈಗೊಳ್ಳಲು ಒಂದು ತಿಂಗಳ ಅವಧಿ ನೀಡಲಾಗಿದೆ.

ಹೆಬ್ಬಾಳದ ಎಸ್ಟೀಮ್ ಮಾಲ್ ಜಂಕ್ಷನ್ನಿಂದ ಸಿಲ್ಕ್ ಬೋರ್ಡ್ ಜಂಕ್ಷನ್ವರೆಗೆ ಮೂರು ಪಥದ ಅವಳಿ ಸುರಂಗ ರಸ್ತೆ ನಿರ್ಮಾಣಕ್ಕಾಗಿ ಟೆಂಡರ್ ಆಹ್ವಾನಿಸಲಾಗಿದೆ. ಬಿಡ್ಗಳನ್ನು ಸಲ್ಲಿಸಲು ಅಕ್ಟೋಬರ್ 3ರವರೆಗೆ ಅವಕಾಶ ನೀಡಲಾಗಿದೆ. ಇದಾದ ಬಳಿಕ ತಾಂತ್ರಿಕ ಭದ್ರತೆ ಪರಿಶೀಲನೆ ಪ್ರಕ್ರಿಯೆಯನ್ನು ಬಿ ಸ್ಮೈಲ್ ಆರಂಭಿಸಲಿದೆ. ಉಳಿದಂತೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.