ಬೆಂಗಳೂರು: ಮಲ್ಲೇಶ್ಪಾಳ್ಯ ಮತ್ತು ಕನ್ನಮಂಗಲ–ದಿಣ್ಣೂರು ಮುಖ್ಯರಸ್ತೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಜೆ.ಬಿ.ನಗರದ ಬಳಿಯ ಮಲ್ಲೇಶ್ಪಾಳ್ಯ ಮುಖ್ಯರಸ್ತೆಯಲ್ಲಿ ಬೈಕ್ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಕೋಡಿಹಳ್ಳಿಯ ನಿವಾಸಿ ಶರಣಬಸಪ್ಪ (22) ಅವರು ಮೃತಪಟ್ಟಿದ್ದಾರೆ. ಶರಣಬಸಪ್ಪ ಮೂಲತಃ ಕಲಬುರಗಿ ಜಿಲ್ಲೆಯವರು.

ಶರಣಬಸಪ್ಪ ಅವರು ಬೈಕ್ನಲ್ಲಿ ತೆರಳುತ್ತಿದ್ದಾಗ, ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಪೆಟ್ಟಾಗಿ ಶರಣಬಸಪ್ಪ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಸಂದರ್ಭದಲ್ಲಿ ಬೈಕ್ ಸವಾರ ಹೆಲ್ಮೆಟ್ ಧರಿಸಿರಲಿಲ್ಲ. ಘಟನೆ ನಂತರ ಕಾರು ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎಂದು ಸಂಚಾರ ಪೊಲೀಸರು ಹೇಳಿದರು. ಜೆ.ಬಿ.ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಯಾಬ್ ಚಾಲಕ ಸಾವು: ಕನ್ನಮಂಗಲ–ದಿಣ್ಣೂರು ಮುಖ್ಯರಸ್ತೆಯಲ್ಲಿ ಸರಕು ಸಾಗಣೆ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸೊಣ್ಣೇನಹಳ್ಳಿಯ ಶ್ರೀನಿವಾಸ್ (23) ಅವರು ಮೃತಪಟ್ಟಿದ್ದಾರೆ.

ಖಾಜಿ ಸೊಣ್ಣೇನಹಳ್ಳಿಯಲ್ಲಿ ನೆಲಸಿದ್ದ ಶ್ರೀನಿವಾಸ್ ಅವರು ಕ್ಯಾಬ್ ಚಾಲಕರಾಗಿದ್ದರು. ಅವರು ಸ್ನೇಹಿತ ಮಲ್ಲಿಕಾರ್ಜುನ್ ಜತೆ ಬೈಕ್ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಬೈಕ್ನ ಹಿಂದೆ ಕುಳಿತಿದ್ದ ಮಲ್ಲಿಕಾರ್ಜುನ್ ಅವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹದೇವಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.