ಬೆಂಗಳೂರು: ಮಾರಕಾಸ್ತ್ರ ತೋರಿಸಿ ನಗದು ಸುಲಿಗೆ ಹಾಗೂ ಸಿಲಿಂಡರ್, ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಯಚೂರಿನ ಸಯ್ಯದ್ ದೋರದ್ (26) ಮತ್ತು ಸಯ್ಯದ್ ಅಶ್ಚಲ್ (28) ಎಂಬುವರನ್ನು ಬಂಧಿಸಿ, ₹2.65 ಲಕ್ಷ ಮೌಲ್ಯದ ಐದು ದ್ವಿಚಕ್ರ ವಾಹನ ಹಾಗೂ ಎಂಟು ಗ್ಯಾಸ್ ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

ನೃಪತುಂಗ ರಸ್ತೆಯ ಶೆಡ್ವೊ೦ದರಲ್ಲಿ ವಾಸವಿದ್ದ ಗಾರೆ ಕೆಲಸಗಾರರೊಬ್ಬರಿಗೆ ಮಾರ್ಚ್ 28ರಂದು ಆರೋಪಿಗಳು ಮಾರಕಾಸ್ತ್ರ ತೋರಿಸಿ, ₹5 ಸಾವಿರ ಸುಲಿಗೆ ಮಾಡಿ ಪರಾರಿಯಾಗಿದ್ದರು. ಈ ಬಗ್ಗೆ ಗಾರೆ ಕೆಲಸಗಾರ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಬಾತ್ಮೀದಾರರ ಮಾಹಿತಿ ಮೇರೆಗೆ ವಿನಾಯಕನಗರ ಸರ್ಕಲ್ ಬಳಿ ಇಬ್ಬರು ವ್ಯಕ್ತಿಗಳನ್ನು ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು.

ವಿಚಾರಣೆ ವೇಳೆ ನಗದು ಸುಲಿಗೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ಮಡಿವಾಳ, ಜಯನಗರ, ಕುಮಾರಸ್ವಾಮಿ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ದ್ವಿಚಕ್ರ ವಾಹನ ಹಾಗೂ ಸಿಲಿಂಡರ್ಗಳನ್ನು ಕಳವು ಮಾಡಿರುವುದು ಗೊತ್ತಾಗಿದೆ.

ಬನಶಂಕರಿಯ ಪ್ರಗತಿಪುರದ ಪರಿಚಿತ ವ್ಯಕ್ತಿಗೆ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದರೆ, ಜೆ.ಪಿ.ನಗರ 5ನೇ ಹಂತದಲ್ಲಿರುವ ಪರಿಚಿತನಿಗೆ ಗ್ಯಾಸ್ ಸಿಲಿಂಡರ್ ನೀಡಿರುವುದಾಗಿ ವಿಚಾರಣೆ ವೇಳೆ ಆರೋಪಿಗಳು ತಿಳಿಸಿದ್ದಾರೆ. ದ್ವಿಚಕ್ರ ವಾಹನಗಳು ಹಾಗೂ ಗ್ಯಾಸ್ ಸಿಲಿಂಡರ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ಬಂಧನದಿಂದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ 2 ದ್ವಿಚಕ್ರ ವಾಹನ, ಮಡಿವಾಳ, ಕುಮಾರಸ್ವಾಮಿ ಲೇಔಟ್, ಜಯನಗರ ಪೊಲೀಸ್ ಠಾಣೆಯ ತಲಾ ಒಂದು ದ್ವಿಚಕ್ರ ವಾಹನ ಕಳವು ಪ್ರಕರಣ ಸೇರಿ ಐದು ಪ್ರಕರಣಗಳು ಪತ್ತೆಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.