ಬೆಂಗಳೂರು: ನಗರದ ಕೆ.ಆರ್. ವೃತ್ತ ಅಂಡರ್ಪಾಸ್ನಲ್ಲಿ ಮಳೆಯ ನೀರು ನಿಲ್ಲುವುದನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳದೇ ಇರುವ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿ ಹಲವು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಆದೇಶಿಸಿದ್ದಾರೆ.

ಏಪ್ರಿಲ್ 29ರಂದು ನಗರದಲ್ಲಿ ಸುರಿದ ಭಾರಿ ಮಳೆಯ ವೇಳೆ ಕೆ.ಆರ್.ವೃತ್ತದ ಅಂಡರ್ಪಾಸ್ ಸಂಪೂರ್ಣ ಜಲಾವೃತವಾಗಿತ್ತು. ಮರುದಿನವೂ ನೀರನ್ನು ತೆರವುಗೊಳಿಸಿರಲಿಲ್ಲ. ಸ್ಥಳಕ್ಕೆ ಭೇಟಿ ನೀಡಿದ್ದ ಲೋಕಾಯುಕ್ತರು, ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಆದೇಶಿಸಿದ್ದರು.

‘2023ರ ಮೇ 22ರಂದು ಸುರಿದಿದ್ದ ಮಳೆಯಿಂದಲೂ ಈ ಅಂಡರ್ಪಾಸ್ ಜಲಾವೃತವಾಗಿತ್ತು. ಹೀಗಿದ್ದೂ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದ ಕಾರಣ ಟ್ಯಾಕ್ಸಿಯೊಂದು ನೀರಿನಲ್ಲಿ ಮುಳುಗಿತ್ತು. ಆ ಅವಘಡದಲ್ಲಿ ಭಾನುರೇಖಾ ಎಂಬ ಸಾಫ್ಟ್ವೇರ್ ಎಂಜಿನಿಯರ್ ಮೃತಪಟ್ಟಿದ್ದರು. ಆ ಬಗ್ಗೆ ತನಿಖೆ ನಡೆಸಿ ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಿದ್ದರು’ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.

‘ವರದಿಯ ಆಧಾರದಲ್ಲಿ ಕ್ರಮ ತೆಗೆದುಕೊಳ್ಳು ವಂತೆ ಈ ಹಿಂದಿನ ಬಿಬಿಎಂಪಿಯ ನೀರುಗಾಲುವೆ ವಿಭಾಗಕ್ಕೆ ಲೋಕಾಯುಕ್ತರು ಸೂಚಿಸಿದ್ದರು. ಆದರೆ ನೀರುಗಾಲುವೆ ವಿಭಾಗದ ಎಂಜಿನಿಯರ್ಗಳು, ‘ಇದು ರಸ್ತೆ ಮೂಲಸೌಕರ್ಯ ಅಭಿವೃದ್ಧಿ ವಿಭಾಗದ ಹೊಣೆ’ ಎಂದು ತಿಳಿಸಿದ್ದರು. ಎರಡೂ ವಿಭಾಗದ ಅಧಿಕಾರಿಗಳು ಪರಸ್ಪರರ ಮೇಲೆ ಆರೋಪ ಮಾಡಿದ್ದಾರೆಯೇ ಹೊರತು ಲೋಪವನ್ನು ಸರಿಪಡಿಸಿಲ್ಲ’ ಎಂದು ವಿವರಿಸಿದೆ.

‘ಎರಡು ವರ್ಷವಾದರೂ ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವ ಕಾರಣ, ಈಗ ಭಾರಿ ಮಳೆ ಸುರಿದಿದ್ದಕ್ಕೆ ಅಂಡರ್ಪಾಸ್ ಮತ್ತೆ ಜಲಾವೃತವಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಹೀಗಾಗಿದೆ. ಹೀಗಾಗಿ, ಸರ್ಕಾರದ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತ ಮತ್ತು ಕೇಂದ್ರ ಪಾಲಿಕೆ ಆಯುಕ್ತರನ್ನು ಪ್ರತಿವಾದಿಗಳನ್ನಾಗಿಸಿ ಪ್ರಕರಣ ದಾಖಲಿಸಲು ಲೋಕಾಯುಕ್ತರು ಸೂಚಿಸಿದ್ದಾರೆ’ ಎಂದು ತಿಳಿಸಿದೆ.

‘ಲೋಕಾಯುಕ್ತರ ಆದೇಶದಂತೆ ಪ್ರಕರಣದ ದಾಖಲಿಸಿದ್ದು, ಮೇ 20ಕ್ಕೆ ವಿಚಾರಣೆ ನಿಗದಿಯಾಗಿದೆ’ ಎಂದು ಮಾಹಿತಿ ನೀಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-4-1089263544

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.