ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇರವಾಗಿ ಕುಲಪತಿ ಭೇಟಿಯಾಗಬೇಡಿ: ವಿದ್ಯಾರ್ಥಿಗಳಿಗೆ ಬೆಂಗಳೂರು ವಿವಿ ಸೂಚನೆ

ವಿದ್ಯಾರ್ಥಿಗಳಿಗೆ ಬೆಂಗಳೂರು ವಿಶ್ವವಿದ್ಯಾಲಯ ಸೂಚನೆ
Last Updated 16 ಅಕ್ಟೋಬರ್ 2022, 21:28 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾ ಲಯದ ಸ್ನಾತಕ, ಸ್ನಾತಕೋತ್ತರ, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಕುಲಪತಿ ಮತ್ತು ಕುಲಸಚಿವರನ್ನು ನೇರ ವಾಗಿ ಭೇಟಿ ಮಾಡಲು ಬರುತ್ತಿರುವುದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಸುತ್ತೋಲೆ ಹೊರಡಿಸಲಾಗಿದೆ.

ತಮ್ಮ ಅಹವಾಲುಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮೊದಲು ಸಂಬಂಧಪಟ್ಟ ಅಧಿಕಾರಿ ಗಳನ್ನು ಭೇಟಿಯಾಗಬೇಕು ಎಂದು ಸೂಚಿಸಲಾಗಿದೆ.

ವಿಭಾಗಮಟ್ಟದಲ್ಲಿ ಆಯಾ ವಿಭಾಗದ ಅಧ್ಯಕ್ಷರು, ವಿದ್ಯಾರ್ಥಿ ನಿಲಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಕ್ಷೇಮಪಾಲಕರು ಅಥವಾ ನಿರ್ದೇಶಕರನ್ನು ಸಂಪರ್ಕಿಸಬೇಕು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವಿಭಾಗದವರೊಂದಿಗೆ ಹಾಗೂ ಶಿಷ್ಯವೇತನ ಮತ್ತು ಇತರೆ ಸೌಲಭ್ಯಗಳ ಬಗ್ಗೆ ವಿಶೇಷಾಧಿಕಾರಿ ಗಳು, ಪರಿಶಿಷ್ಟ ಜಾತಿ, ಪಂಗಡ ಘಟಕ ಮತ್ತು ಹಿಂದುಳಿ ವರ್ಗದ ಕೋಶ ಇವರ ಮೂಲಕ ಮಾತ್ರವೇ ಪೂರ್ವಾನುಮತಿ ಪಡೆದುಕೊಂಡು ಕಚೇರಿಯ ಸಮಯ ದಲ್ಲಿ ಕುಲಪತಿ ಅಥವಾ ಕುಲಸಚಿವರನ್ನು ಭೇಟಿಯಾಗುವಂತೆ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT