ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಎಲ್‌ಬಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Last Updated 13 ಜುಲೈ 2021, 12:52 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜು, 2021–22ನೇ ಶೈಕ್ಷಣಿಕ ಸಾಲಿನ ಐದು ವರ್ಷದ ಬಿಎ–ಎಲ್‌ಎಲ್‌ಬಿ (ಹಾನರ್ಸ್‌ ಕೋರ್ಸ್‌) ಪದವಿ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.

ದ್ವಿತೀಯ ಪಿಯುಸಿ ಹಾಗೂ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ ಶೇ 45ರಷ್ಟು ಅಂಕ ಪಡೆದ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಶೇ 40 ಹಾಗೂ ಒಬಿಸಿ ವಿದ್ಯಾರ್ಥಿಗಳು ಶೇ 42ರಷ್ಟು ಅಂಕಗಳನ್ನು ಪಡೆದಿರಬೇಕು.

ಸಾಮಾನ್ಯ ವರ್ಗಕ್ಕೆ 20 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಹಾಗೂ ವಿದೇಶಿ ವಿದ್ಯಾರ್ಥಿಗಳಿಗೆ 22 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಆಗಸ್ಟ್‌ 10ರೊಳಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ www.bangaloreuniversity.ac.in ನಲ್ಲಿ ಅರ್ಜಿ ನಮೂನೆ ಹಾಗೂ ಇತರ ವಿವರಗಳನ್ನೊಳಗೊಂಡ ಕೈಪಿಡಿ ಲಭ್ಯವಿರುತ್ತದೆ.

ಆನ್‌ಲೈನ್‌ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಡೌನ್‌ಲೋಡ್‌ ಮಾಡಿಕೊಂಡು ಸಂಬಂಧಪಟ್ಟ ಎಲ್ಲಾ ದೃಢೀಕೃತ ದಾಖಲೆಗಳೊಂದಿಗೆ ಅದನ್ನು ಆಗಸ್ಟ್‌ 12ರೊಳಗೆ ಪ್ರಾಂಶುಪಾಲರು, ವಿಶ್ವವಿದ್ಯಾಲಯ ಕಾನೂನು ಕಾಲೇಜು, ಜ್ಞಾನಭಾರತಿ ಆವರಣ, ಬೆಂಗಳೂರು–560056 ಈ ವಿಳಾಸಕ್ಕೆ ಸಲ್ಲಿಸಲು ತಿಳಿಸಲಾಗಿದೆ.

ಸಾಮಾನ್ಯ ಹಾಗೂ ಸೆಲ್ಫ್‌ ಫೈನಾನ್ಸ್‌, ಇವೆರಡು ಸೀಟುಗಳಿಗೂ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ವರ್ಗ ಹಾಗೂ ಒಬಿಸಿಗೆ ₹850, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ–1ಕ್ಕೆ ₹550 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗೆ 080–23392384, 080–22961174 ಅಥವಾ 080–22961172 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT