ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿಶ್ವವಿದ್ಯಾಲಯದಿಂದ 4 ವರ್ಷಗಳ ಆನರ್ಸ್ ಕೋರ್ಸ್‌

Last Updated 19 ಅಕ್ಟೋಬರ್ 2021, 15:17 IST
ಅಕ್ಷರ ಗಾತ್ರ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇ‍ಪಿ) ಅನುಷ್ಠಾನಕ್ಕೆ ಮುಂದಾಗಿರುವ ಬೆಂಗಳೂರು ವಿಶ್ವವಿದ್ಯಾಲಯವು 2021–22ನೇ ಸಾಲಿನಿಂದ ನಾಲ್ಕು ವರ್ಷಗಳ ಬಿಎ, ಬಿಎಸ್ಸಿ ಆನರ್ಸ್‌ ಪದವಿ ಕೋರ್ಸ್‌ಗಳನ್ನು ಆರಂಭಿಸಲು ಮುಂದಾಗಿದೆ.

ಜ್ಞಾನ ಭಾರತಿ ಆವರಣದಲ್ಲಿರುವ ಇತಿಹಾಸ ಮತ್ತು ಪ್ರಾಚ್ಯ ವಸ್ತು ಸಂಗ್ರಹಾಲಯದ ಕಟ್ಟಡದಲ್ಲಿ ತರಗತಿಗಳನ್ನು ನಡೆಸಲು ನಿರ್ಧರಿಸಲಾಗಿದೆ.

ವಿಶ್ವವಿದ್ಯಾಲಯದ ಕುಲಪತಿ ಕೆ.ಆರ್‌.ವೇಣುಗೋಪಾಲ್‌ ಅವರು ವಸ್ತು ಸಂಗ್ರಹಾಲಯದ ಕಟ್ಟಡಕ್ಕೆ ಮಂಗಳವಾರ ಭೇಟಿ ನೀಡಿ ಲಭ್ಯ ಕೊಠಡಿಗಳನ್ನು ಪರಿಶೀಲಿಸಿದರು. ಕಟ್ಟಡಕ್ಕೆ ಅಗತ್ಯವಾದ ವಿದ್ಯುತ್‌ ಸಂಪರ್ಕ ಕಲ್ಪಿಸುವಂತೆ ವಿಶ್ವವಿದ್ಯಾಲಯದ ಮುಖ್ಯ ಕಾರ್ಯಪಾಲಕ ಎಂಜಿನಿಯರ್‌ ಬಿ.ಟಿ. ಚಂದ್ರಶೇಖರ ಅವರಿಗೆ ಸೂಚಿಸಿದರು. ಪೀಠೋಪಕರಣ ಹಾಗೂ ಗ್ರೀನ್‌ ಬೋರ್ಡ್‌ ವ್ಯವಸ್ಥೆ ಮಾಡುವಂತೆಯೂ ನಿರ್ದೇಶಿಸಿದರು.

‘ಎನ್‌ಇಪಿ ಅಡಿಯಲ್ಲಿ ಬಿಎ ಹಾಗೂ ಬಿಎಸ್ಸಿ ಆನರ್ಸ್‌ ಕೋರ್ಸ್‌ಗಳನ್ನು ಆರಂಭಿಸಲು ನಿರ್ಧರಿಸಿದ್ದೇವೆ. ಆಸಕ್ತರಿಂದ ಅರ್ಜಿಗಳನ್ನೂ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇದೇ 28 ಕೊನೆಯ ದಿನ. ಪ್ರತಿ ತರಗತಿಗೆ 30 ವಿದ್ಯಾರ್ಥಿಗಳಿಗೆ ಪ್ರವೇಶ ಇರಲಿದೆ. ಮೆರಿಟ್‌ ಆಧಾರದಲ್ಲಿ ಸೀಟು ಹಂಚಿಕೆ ಮಾಡಲಾಗುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನೂ ನೀಡಲಾಗುತ್ತದೆ’ ಎಂದುಕೆ.ಆರ್‌.ವೇಣುಗೋಪಾಲ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT