ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀರಿನ ಸಮಸ್ಯೆ: ಬೆಂಗಳೂರು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ

Published 11 ಮೇ 2024, 15:50 IST
Last Updated 11 ಮೇ 2024, 15:50 IST
ಅಕ್ಷರ ಗಾತ್ರ

ಬೆಂಗಳೂರು: ನೀರು ಪೂರೈಕೆಯಲ್ಲಿ ವ್ಯತ್ಯಯ ಖಂಡಿಸಿ ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್‌ ವಿದ್ಯಾರ್ಥಿಗಳು ಶನಿವಾರ ಪ್ರತಿಭಟಿಸಿದರು. 

ಶುಕ್ರವಾರ ರಾತ್ರಿ ವಿದ್ಯುತ್ ವ್ಯತ್ಯಯವಾಗಿ ಸಂಪ್‌ನಿಂದ ‘ಓವರ್‌ಹೆಡ್’ ಟ್ಯಾಂಕ್‌ಗೆ ನೀರು ಸರಬರಾಜು ಆಗದೇ ವಿದ್ಯಾರ್ಥಿಗಳು ಪರದಾಡಿದರು. 

ಹೆಚ್ಚಿನ ಸಾಮರ್ಥ್ಯದ ‘ಓವರ್‌ ಹೆಡ್’ ಟ್ಯಾಂಕ್‌ಗಳನ್ನು ಒದಗಿಸಲು ಕೆಲ ಸಮಯದಿಂದಲೂ ಬೇಡಿಕೆ ಇಟ್ಟಿದ್ದೆವು. ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದರು. ಈಗ ಸಮಸ್ಯೆ ಎದುರಿಸುವಂತಾಗಿದೆ. ಇದರಿಂದ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನಂತರ ಟ್ಯಾಂಕರ್‌ಗಳಲ್ಲಿ ನೀರು ಪೂರೈಸಲು ವಿಶ್ವವಿದ್ಯಾಲಯದ ಅಧಿಕಾರಿಗಳು ಕ್ರಮಕೈಗೊಂಡರು. ಸಮಸ್ಯೆಗೆ ಶಾಶ್ವತವಾದ ಪರಿಹಾರ ದೊರಕಿಸುವ ಭರವಸೆ ನೀಡಿದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT