ಬೆಂಗಳೂರು: ಶೆಡ್ಗೆ ನುಗ್ಗಿ ಯುವತಿ ಮೇಲೆ ಹಲ್ಲೆ ನಡೆಸಿದ್ದ ನಾಲ್ವರು ಆರೋಪಿಗಳ ವಿರುದ್ಧ ವರ್ತೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

20 ವರ್ಷದ ಯುವತಿ ನೀಡಿದ ದೂರಿನ ಮೇಲೆ ವರ್ತೂರು ನಿವಾಸಿ ಜಮ್ಶೀದ್, ಟುಕೋನ್, ಬಾಪೂನ್, ನೂರ್ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

‘ವರ್ತೂರಿನ ಶೋಭಾ ಅಪಾರ್ಟ್ಮೆಂಟ್ ಸಮೀಪದ ಶೆಡ್ನಲ್ಲಿ ಒಬ್ಬಳೇ ನೆಲಸಿದ್ದೇನೆ. ನಾನು ಕೆಲಸಕ್ಕೆ ಹೋಗುವಾಗ–ಬರುವಾಗ ಆರೋಪಿಗಳು ಹಿಂಬಾಲಿಸುತ್ತಿದ್ದರು. ಹಿಂಬಾಲಿಸದಂತೆ ಎಚ್ಚರಿಕೆ ನೀಡಿದ್ದೆ. ಆದರೂ, ನಾಲ್ವರು ಅದೇ ರೀತಿಯ ವರ್ತನೆ ಮುಂದುವರಿಸಿದ್ದರು. ಏಪ್ರಿಲ್ 4ರಂದು ರಾತ್ರಿ 9.30ರ ಸುಮಾರಿಗೆ ನಾಲ್ವರು ಶೆಡ್ಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ನಡೆಸಿದರು. ಅಲ್ಲದೇ ‘ಬೆಂಗಳೂರಿನಲ್ಲಿ ಇರಲು ಬಿಡುವುದಿಲ್ಲ’ ಎಂದು ಬೆದರಿಕೆ ಹಾಕಿದ್ದಾರೆ. ಶೆಡ್ನಲ್ಲಿದ್ದ ಸ್ನೇಹಿತನ ಮೇಲೂ ಹಲ್ಲೆ ನಡೆಸಿದರು’ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

‘ಆರೋಪಿಗಳ ಪೈಕಿ, ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಮೂವರು ತಲೆಮರೆಸಿಕೊಂಡಿದ್ದಾರೆ. ಯುವತಿಯ ಖಾಸಗಿತನಕ್ಕೆ ಧಕ್ಕೆ ತಂದಿರುವ ಮತ್ತು ಹಲ್ಲೆ ನಡೆಸಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಕೊಳ್ಳಲಾಗುವುದು’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.