ಬೆಂಗಳೂರು: ದ್ವಿಚಕ್ರ ವಾಹನ ಹಾಗೂ ಆಟೊ ಕಳವು ಮಾಡುತ್ತಿದ್ದ ಆರೋಪಿಯನ್ನು ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆ.ಜಿ.ಹಳ್ಳಿ ವೆಂಕಟೇಶಪುರ ನಿವಾಸಿ ಮೊಹಮದ್ ಹಫೀಜ್ ಅಲಿಯಾಸ್ ಚಿಟ್ಕಿ ಬಂಧಿತ. ಆರೋಪಿಯಿಂದ ಒಂದು ದ್ವಿಚಕ್ರ ವಾಹನ ಹಾಗೂ ಮೂರು ಆಟೊ ರಿಕ್ಷಾಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹೆಗಡೆ ನಗರ ನಿವಾಸಿಯೊಬ್ಬರು ಎಚ್.ಬಿ.ಆರ್.ಲೇಔಟ್ ಸರ್ಕಾರಿ ಆಸ್ಪತ್ರೆಯ ಹತ್ತಿರ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿತ್ತು. ಈ ಸಂಬಂಧ ದೂರು ದಾಖಲಿಸಿಕೊಂಡ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡರು.

ನಾಗವಾರದ ವೈಯಾಲಿಕಾವಲ್ ಲೇಔಟ್ನ ಶಾಲೆಯೊಂದರ ಬಳಿ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ, ದ್ವಿಚಕ್ರ ಹಾಗೂ ಆಟೊ ಕಳವು ಮಾಡಿರುವುದಾಗಿ ತಪ್ಪೊಪ್ಪಿಕೊಂಡ. ಅಲ್ಲದೇ ಮಹದೇವಪುರದಲ್ಲಿಯೂ ಆಟೊ ಕಳವು ಮಾಡಿರುವುದಾಗಿ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಬಂಧನದಿಂದ ಗೋವಿಂದಪುರ ಠಾಣೆಯ ಮೂರು ಪ್ರಕರಣ, ಮಹದೇವಪುರ ಠಾಣೆಯ ಒಂದು ಪ್ರಕರಣ ಪತ್ತೆಯಾಗಿವೆ.

ರಸ್ತೆ ಬದಿ ಹಾಗೂ ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ಆಟೊ, ಬೈಕ್ಗಳನ್ನು ಆರೋಪಿ ಕಳವು ಮಾಡುತ್ತಿದ್ದ. ಬೈಕ್ಗಳನ್ನು ಮಾರಾಟ ಮಾಡಿ ಬಂದ ಹಣ ವನ್ನು ದುಶ್ಚಟಗಳಿಗೆ ಖರ್ಚು ಮಾಡುತ್ತಿದ್ದ. ವಿವಿಧ ಪ್ರಕರಣಗಳಲ್ಲಿ ಆರೋಪಿ ಜೈಲು ಸೇರಿ, ಬಿಡುಗಡೆಯಾದ ಬಳಿಕ ಮತ್ತೆ ಕಳ್ಳತನ ಮಾಡುತ್ತಿದ್ದ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-4-2129469521

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.