ಬೆಂಗಳೂರು: ಮನೆಯ ಎದುರು ಹಾಗೂ ರಸ್ತೆಯ ಬದಿಯಲ್ಲಿ ನಿಲುಗಡೆ ಮಾಡುತ್ತಿದ್ದ ದ್ವಿಚಕ್ರ ವಾಹನಗಳನ್ನು ನಕಲಿ ಕೀ ಬಳಸಿ, ಕಳ್ಳತನ ಮಾಡುತ್ತಿದ್ದ ಹೊರರಾಜ್ಯದ ಇಬ್ಬರನ್ನು ಹೆಬ್ಬಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆಂಧ್ರ ಪ್ರದೇಶ ಶೇಖ್ ಶಫೀರ್ ಬಾಷಾ ಹಾಗೂ ಆನಂದ್ ಬಂಧಿತರು.

ಬಂಧಿತರಿಂದ ₹41.67 ಲಕ್ಷ ಮೌಲ್ಯದ 51 ದ್ವಿಚಕ್ರ ವಾಹನ, ಕಂಪ್ಯೂಟರ್, ಪ್ರಿಂಟರ್, ಮೊಬೈಲ್ ಫೋನ್ ಹಾಗೂ 501 ನಕಲಿ ಆರ್.ಸಿ ಕಾರ್ಡ್ ಜಪ್ತಿ ಮಾಡಲಾಗಿದೆ. ಠಾಣಾ ವ್ಯಾಪ್ತಿಯ ಗೊಲ್ಲಹಳ್ಳಿಯ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ನಗರದಲ್ಲಿ ಕದ್ದ ದ್ವಿಚಕ್ರ ವಾಹನಗಳನ್ನು ಆಂಧ್ರ ಪ್ರದೇಶಕ್ಕೆ ಕೊಂಡೊಯ್ಯುತ್ತಿದ್ದರು. ಉಳಿದ ವಾಹನಗಳನ್ನು ಮುಳಬಾಗಿಲು, ಚಿಂತಾಮಣಿ ಹಾಗೂ ಹೆಬ್ಬಗೋಡಿಯ ಖಾಲಿ ಪ್ರದೇಶದಲ್ಲಿ ನಿಲುಗಡೆ ಮಾಡಿದ್ದರು. ಆಂಧ್ರ ಪ್ರದೇಶದಲ್ಲಿ ಮಧ್ಯವರ್ತಿಯ ನೆರವು ಪಡೆದು ಸೈಬರ್ ಕೇಂದ್ರದಲ್ಲಿ ನಕಲಿ ಆರ್.ಸಿ ಕಾರ್ಡ್ ತಯಾರಿಸುತ್ತಿದ್ದರು. ಕಡಿಮೆ ಬೆಲೆಗೆ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲಾಗುವುದೆಂದು ಫೇಸ್ಬುಕ್ನಲ್ಲಿ ಜಾಹೀರಾತು ನೀಡಿ ಕಳ್ಳತನ ಮಾಡಿದ್ದ ವಾಹನಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದರು.

‘ಇಬ್ಬರ ಬಂಧನದಿಂದ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಒಟ್ಟು 27 ಕಳ್ಳತನ ಪ್ರಕರಣಗಳು ಪತ್ತೆ ಆಗಿವೆ. ಆರೋಪಿಗಳಿಂದ ಜಪ್ತಿ ಮಾಡಿಕೊಂಡ ವಾಹನಗಳನ್ನು ವಾರಸುದಾರರಿಗೆ ಹಸ್ತಾಂತರ ಮಾಡಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-4-492784876

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.