ಬುಧವಾರ, ಸೆಪ್ಟೆಂಬರ್ 22, 2021
24 °C

ಗಲಭೆ; ಮತ್ತೆ ಎಂಟು ಮಂದಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ), ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಹಾಗೂ ಕಾವಲ್‌ಭೈರಸಂದ್ರದಲ್ಲಿ ನಡೆದಿದ್ದ ಗಲಭೆ ಸಂಬಂಧ ಮತ್ತೆ ಎಂಟು ಆರೋಪಿಗಳನ್ನು ಪೂರ್ವ ವಿಭಾಗದ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಸ್ಥಳೀಯ ನಿವಾಸಿಗಳಾದ ಸೈಯದ್ ಅಯಾಜ್, ಸೈಯದ್ ತಬ್ರೇಜ್, ಮೊಹಮ್ಮದ್ ಸಲ್ಮಾನ್, ಮೊಹಮ್ಮದ್ ಪಾಷಾ, ಜಮೀರ್ ಪಾಷಾ ಹಾಗೂ ಇಲಾಯಿದ್ ಬಂಧಿತರು. ಇನ್ನಿಬ್ಬರ ಹೆಸರು ಗೊತ್ತಾಗಿಲ್ಲ.

‘ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಆರೋಪಿಗಳು, ಆಗಸ್ಟ್ 11ರಂದು ನಡೆದ ಗಲಭೆಯಲ್ಲಿ ಭಾಗಿಯಾಗಿದ್ದರು. ವಿಡಿಯೊ ಹಾಗೂ ಮೊಬೈಲ್ ಕರೆಗಳ ವಿವರಗಳನ್ನು ಆಧರಿಸಿ ಅವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು