ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಕ್ರಮ ಖಚಿತ: ಜಮೀರ್ ಅಹ್ಮದ್ ಖಾನ್

Last Updated 18 ಫೆಬ್ರುವರಿ 2021, 7:45 IST
ಅಕ್ಷರ ಗಾತ್ರ

ಬೆಂಗಳೂರು: 'ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಕ್ರಮ ಖಚಿತ' ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು.

ಆ ಮೂಲಕ ಜಮೀರ್, ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪರ ದನಿ ಎತ್ತಿದ್ದಾರೆ.

ಡಿ.ಜೆ ಹಳ್ಳಿಯಲ್ಲಿ ನಡೆದ ಗಲಭೆ ಮತ್ತು ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ಸಂಪತ್ ರಾಜ್ ಆರೋಪಿಯಾಗಿದ್ದಾರೆ.

ಕುಮಾರಕೃಪಾ ಅತಿಥಿ ಗೃಹದ ಬಳಿ‌ ಗುರುವಾರ ಮಾತನಾಡಿದ ಅವರು, 'ಸಂಪತ್ ರಾಜ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಮನವಿ ಮಾಡಲೆಂದೇ ಈಗ ನಾನು ಬಂದಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೂ ಮಾತನಾಡುತ್ತೇನೆ' ಎಂದರು.

'ಸಂಪತ್ ರಾಜ್ ವಿರುದ್ಧದ ಆರೋಪ ಸಾಬೀತಾಗಿಲ್ಲ ಎಂದು ಈ ಮೊದಲು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದರು. ಆದರೆ, ಈಗ ಸಂಪತ್ ರಾಜ್ ಜೈಲಿಗೆ ಹೋಗಿ ಬಂದಾಗಿದೆ. ಹೀಗಿರುವಾಗ ಸಂಪತ್ ರಾಜ್ ಮೇಲೆ ಕ್ರಮ ಆಗಲೇಬೇಕು' ಎಂದು ಜಮೀರ್ ಅಹ್ಮದ್ ಖಾನ್ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT