ಬೆಂಗಳೂರು: ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ ರೌಡಿಶೀಟರ್ ಒಬ್ಬನ ಸ್ನೇಹಿತನ ತಾಯಿಗೆ ಬೈಕ್ ತಾಗಿದ್ದಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.

ಸಿದ್ಧಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಾವೇರಮ್ಮ ಕೊಳೆಗೇರಿ ಬಳಿಯ ಬೈರಸಂದ್ರದಲ್ಲಿ ಆಗಸ್ಟ್ 28ರಂದು ರಾತ್ರಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮಕ್ಕೆ ರೌಡಿಶೀಟರ್ ವಿಜಯ್ ಸೇರಿದಂತೆ ಆತನ ಸ್ನೇಹಿತರು ಹೋಗಿದ್ದರು. ಬೈಕ್ ತಾಗಿರುವುದನ್ನು ಪ್ರಶ್ನಿಸಿದಕ್ಕೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು, ಗಲಾಟೆ ನಡೆದಿದೆ.

ಗಲಾಟೆ ವಿಕೋಪಕ್ಕೆ ತಿರುಗಿ ಪರಸ್ಪರ ಹೊಡೆದಾಡಿದ್ದಾರೆ. ಕ್ರಿಕೆಟ್ ಬ್ಯಾಟ್ನಿಂದ ಬಡಿದಾಡಿಕೊಂಡ ಪರಿಣಾಮ ಪ್ರಭು, ಪ್ರವೀಣ್, ಸಂದೀಪ್, ರೋಹಿತ್ ಎಂಬುವವರು ಗಾಯಗೊಂಡಿದ್ದಾರೆ.

ಸ್ಥಳಕ್ಕೆ ಸಿದ್ಧಾಪುರ ಠಾಣೆ ಪೊಲೀಸರು ಭೇಟಿ ನೀಡಿ ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಎರಡು ಗುಂಪಿನವರು ನೀಡಿದ ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.