ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್ಐಆರ್) ಪೂರ್ವಬಾವಿಯಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯು ನಡೆಸುತ್ತಿರುವ ಮತದಾರರ ಪಟ್ಟಿಯ ಮ್ಯಾಪಿಂಗ್ನಲ್ಲಿ ಬೆಂಗಳೂರಿನಲ್ಲಿಯೇ ಅತ್ಯಂತ ಕಡಿಮೆ ಪ್ರಗತಿ ದಾಖಲಾಗಿದೆ.

ಇಡೀ ರಾಜ್ಯದಲ್ಲಿ 75.70 ಲಕ್ಷ ಮತದಾರರ ಮ್ಯಾಪಿಂಗ್ ಪ್ರಕ್ರಿಯೆ ಇನ್ನಷ್ಟೇ ನಡೆಯಬೇಕಿದೆ. ಅದರಲ್ಲಿ ಬೆಂಗಳೂರಿನ ಮತದಾರರ ಸಂಖ್ಯೆಯೇ 31.11 ಲಕ್ಷದಷ್ಟಿದೆ.

2025ರ ಅಂತಿಮ ಮತದಾರರ ಪಟ್ಟಿಯ ಪ್ರಕಾರ ಬೆಂಗಳೂರು ನಗರದಲ್ಲಿ ಒಟ್ಟು 1.03 ಕೋಟಿಯಷ್ಟು ಮತದಾರರು ಇದ್ದಾರೆ. ಈ ಪೈಕಿ ಮೇ 14ರ ಗುರುವಾರದ ಬೆಳಿಗ್ಗೆಯ ವೇಳೆಗೆ 71.89 ಲಕ್ಷ ಮತದಾರರ ವಿವರಗಳನ್ನಷ್ಟೇ ಹೋಲಿಸಿ ನೋಡಿ, ಖಚಿತಪಡಿಸಿಕೊಳ್ಳಲಾಗಿದೆ. ಒಟ್ಟು ಮತದಾರರ ಸಂಖ್ಯೆಗೆ ಹೋಲಿಸಿದರೆ, ವಿವರ ಖಚಿತಗೊಂಡವರ ಪ್ರಮಾಣ ಶೇ 69.80ರಷ್ಟು ಮಾತ್ರ.

ಉಳಿದ ಜಿಲ್ಲೆಗಳ ಪೈಕಿ 18ರಲ್ಲಿ ಶೇ 90ಕ್ಕಿಂತಲೂ ಹೆಚ್ಚು ಪ್ರಗತಿ ದಾಖಲಾಗಿದ್ದರೆ, 12ರಲ್ಲಿ ಶೇ 80ಕ್ಕಿಂತಲೂ ಹೆಚ್ಚು ಮತ್ತು ಶೇ 90ಕ್ಕಿಂತ ಕಡಿಮೆಯಷ್ಟು ಮ್ಯಾಪಿಂಗ್ ಪ್ರಕ್ರಿಯೆ ಪೂರ್ಣಗೊಂಡಿದೆ. ಕೊಡಗಿನಲ್ಲಿ ಅತಿಹೆಚ್ಚು, ಅಂದರೆ ಶೇ 95.53ರಷ್ಟು ಮತದಾರರ ಮ್ಯಾಪಿಂಗ್ ಮುಗಿದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-51-369418248

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.