ಬೆಂಗಳೂರು: ನಾಗರಿಕರ ಮನವಿಗೆ ಸ್ಪಂದಿಸಿರುವ ರಾಜ್ಯ ಚುನಾವಣಾ ಆಯೋಗ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ವಾರು ಮತದಾರರ ಪರಿಷ್ಕೃತ ಕರಡು ಪಟ್ಟಿಗೆ ದೂರು, ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮಾರ್ಚ್ 30ರವರೆಗೆ ವಿಸ್ತರಿಸಿದೆ.

ಮಾರ್ಚ್ 9ರಂದು ಮತದಾರರ ಪರಿಷ್ಕೃತ ಕರಡು ಪಟ್ಟಿಯನ್ನು ಪ್ರಕಟಿಸಿ, 16ರವರೆಗೆ ಆಕ್ಷೇಪಣೆಗೆ ಅವಕಾಶ ಕಲ್ಪಿಸಲಾಗಿತ್ತು. ನಂತರ, ಈ ಅವಧಿಯನ್ನು 20ರವರೆಗೆ ವಿಸ್ತರಿಸಲಾಗಿತ್ತು. ಆದರೆ, ಜಿಬಿಎ ಜಾಲತಾಣದಲ್ಲಿ (https://gba.karnataka.gov.in/electoral2026) ಮತದಾರರ ಪಟ್ಟಿ ಲಭ್ಯವಿರಲಿಲ್ಲ. ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಮಾರ್ಚ್ 17ರಂದು ಸುದ್ದಿ ಪ್ರಕಟವಾಗಿತ್ತು. ಜಾಲತಾಣದಲ್ಲಿ ಮತದಾರರ ಹೆಸರು ಹಾಗೂ ಎಪಿಕ್ ಸಂಖ್ಯೆಯಂತೆ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ಹುಡುಕುವ ಆಯ್ಕೆಯನ್ನು ಮಾರ್ಚ್ 18ರಂದು ಜಿಬಿಎ ಚಾಲ್ತಿಗೊಳಿಸಿದೆ.

ರಾಜ್ಯ ಚುನಾವಣಾ ಆಯೋಗಕ್ಕೆ ನಾಗರಿಕರು ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ, ಆಕ್ಷೇಪಣೆ ಅವಧಿಯನ್ನು ಎರಡನೇ ಬಾರಿಗೆ ವಿಸ್ತರಿಸಿ ಬುಧವಾರ ಆದೇಶ ಹೊರಡಿಸಲಾಗಿದೆ. ಅಲ್ಲದೆ, ಮತದಾರರ ಅಂತಿಮ ಪಟ್ಟಿ ಪ್ರಕಟಣೆಯ ದಿನವನ್ನು ಏಪ್ರಿಲ್ 6ರಿಂದ 18ಕ್ಕೆ ಮುಂದೂಡಲಾಗಿದೆ.

ಒಂದೇ ದಿನ 80 ಬಸ್ ತಂಗುದಾಣ ಸ್ವಚ್ಛ

ಬೆಂಗಳೂರು: ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ, ‘ವಿಶೇಷ ಸ್ವಚ್ಛತಾ ಅಭಿಯಾನ’ದಲ್ಲಿ ಒಂದೇ ದಿನ 80 ಬಸ್ ತಂಗುದಾಣಗಳನ್ನು ಸ್ವಚ್ಛಗೊಳಿಸಲಾಗಿದೆ ಎಂದು ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದರು.

ಶಾಂತಿನಗರ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ 11 ಬಸ್ ತಂಗುದಾಣ, ಸಿ.ವಿ. ರಾಮನ್ ನಗರ ಕ್ಷೇತ್ರದ ವ್ಯಾಪ್ತಿಯಲ್ಲಿ 24, ಗಾಂಧಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ 19, ಚಾಮರಾಜಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ 12, ಚಿಕ್ಕಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ ಎಂಟು, ಶಿವಾಜಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಏಳು ಬಸ್ ತಂಗುದಾಣಗಳನ್ನು ಶುಚಿಗೊಳಿಸಲಾಗಿದೆ.

ಪ್ರಾಣಿತ್ಯಾಜ್ಯ ನಿರ್ವಹಣೆಗೆ ಎನ್ಜಿಒ

ಬೆಂಗಳೂರು: ನೈರ್ಮಲ್ಯ ಮತ್ತು ಸಾರ್ವಜನಿಕ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಬೆಂಗಳೂರು ದಕ್ಷಿಣ ನಗರ ಪಾಲಿಕೆ, ‘ವೇದನ್’ ಎಂಬ ಸ್ವಯಂಸೇವಾ ಸಂಸ್ಥೆಯ ಸಹಯೋಗದೊಂದಿಗೆ ಪ್ರಾಣಿತ್ಯಾಜ್ಯ ನಿರ್ವಹಣೆಯನ್ನು ವ್ಯವಸ್ಥಿತಗೊಳಿಸಲು ವೈಜ್ಞಾನಿಕ ಮಾರ್ಗಸೂಚಿಯನ್ನು ಸಿದ್ಧಪಡಿಸಲಿದೆ ಎಂದು ಆಯುಕ್ತ ಕೆ.ಎನ್. ರಮೇಶ್ ಹೇಳಿದರು.

‘ಮಾಂಸ ಮಾರಾಟಗಾರರಿಂದ ಆಗುತ್ತಿರುವ ಅವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಸಮಸ್ಯೆಯನ್ನು ಹೋಗಲಾಡಿಸಿ, ಸುಸಜ್ಜಿತ ಮತ್ತು ಆರೋಗ್ಯಕರ ಸಂಗ್ರಹಣಾ ವ್ಯವಸ್ಥೆಯನ್ನು ರೂಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ’ ಎಂದು ತಿಳಿಸಿದರು.

ವೇದನ್ ಸಂಸ್ಥೆಯು ವಲಯದಾದ್ಯಂತ ಮಾಂಸ ಮತ್ತು ಪ್ರಾಣಿಜನ್ಯ ಉತ್ಪನ್ನಗಳ ಮಳಿಗೆಗಳಲ್ಲಿ ಸಮೀಕ್ಷೆ ನಡೆಸಿ, ತ್ಯಾಜ್ಯ ಉತ್ಪತ್ತಿಯಾಗುವ ಸ್ಥಳಗಳನ್ನು ನಕ್ಷೆ ಮಾಡಿದೆ. ಸಮೀಕ್ಷೆಯ ದತ್ತಾಂಶದ ಆಧಾರದ ಮೇಲೆ ಪ್ರತ್ಯೇಕ ಆಟೊ ಸಂಗ್ರಹಣಾ ಮಾರ್ಗಗಳನ್ನು ವಿನ್ಯಾಸಗೊಳಿಸಲಾಗಿದೆ. ಇದರಲ್ಲಿ ಪ್ರತಿ ಸ್ಥಳಕ್ಕೆ ತಲುಪುವ ನಿಖರ ಸಮಯ ಮತ್ತು ವಾಹನ ನಿಲ್ಲಿಸುವ ಅವಧಿಯನ್ನು ನಿಗದಿಪಡಿಸಲಾಗಿದೆ ಎಂದರು.

ನಗರ ಪಾಲಿಕೆಯು ಶೀಘ್ರದಲ್ಲೇ ಸ್ವಯಂ ಸೇವಾ ಸಂಸ್ಥೆಗಳೊಂದಿಗೆ ಕೈ ಜೋಡಿಸಿ ಸ್ಥಳೀಯ ಮಾಂಸ ಮಾರಾಟಗಾರರಿಗೆ ಹೊಸ ನಿಯಮಗಳನ್ನು ಅನುಷ್ಠಾನಕ್ಕೆ ತಂದು ಮಾರಾಟಗಾರರಲ್ಲಿ ಈ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಿವೆ ಎಂದರು.

ರಸ್ತೆಯಲ್ಲಿ ಬುಟ್ಟಿ: ಪಶ್ಚಿಮ ಬಂಗಾಳದ ಪ್ರಮುಖ ನಗರಗಳ ರಸ್ತೆಗಳಲ್ಲಿ ಕಸದ ಬುಟ್ಟಿಗಳನ್ನು ಅಳವಡಿಸಿ ‘ಬ್ಲ್ಯಾಕ್ ಸ್ಪಾಟ್’ ಕಡಿಮೆಗೊಳಿಸಲಾಗಿದೆ. ಸ್ಥಳೀಯ ನಗರ ಪಾಲಿಕೆಯೊಂದಿಗೆ ಕೈ ಜೋಡಿಸಿ ಈ ಯಶಸ್ಸು ಸಾಧಿಸಿರುವ ಆದ್ಮಿ ಬಿನ್ಸ್ ಸಂಸ್ಥೆಯವರೊಂದಿಗೆ ದಕ್ಷಿಣ ನಗರ ಪಾಲಿಕೆ ಪ್ರಮುಖ ರಸ್ತೆಗಳಲ್ಲಿ ಬುಟ್ಟಿ ಅಳವಡಿಸುವ ಸಂಬಂಧ ಚರ್ಚೆ ನಡೆಸಲಾಯಿತು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.