ಬೆಂಗಳೂರು: ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (ಎಸ್ಐಆರ್) ಅಡಿ ಮುಕ್ತ-ಪಾರದರ್ಶಕ ಪಟ್ಟಿ ಸಿದ್ಧಗೊಳಿಸಲು ಕ್ರಮ ಕೈಗೊಳ್ಳುವಂತೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಹಾಗೂ ಪಶ್ಚಿಮ ನಗರ ಪಾಲಿಕೆ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದರು.

ಅರ್ಹ ಮತದಾರರು ಚುನಾವಣಾ ಪ್ರಕ್ರಿಯೆಯಿಂದ ವಂಚಿತರಾಗಬಾರದು ಮತ್ತು ಅನರ್ಹರ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಯಬಾರದು ಎಂಬ ಉದ್ದೇಶದಿಂದ ಕೇಂದ್ರ ಚುನಾವಣಾ ಆಯೋಗವು ರಾಜ್ಯದಾದ್ಯಂತ ಎಸ್ಐಆರ್ ಹಮ್ಮಿಕೊಂಡಿದೆ. ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿ ನವೀಕರಿಸಲು ಚುನಾವಣಾ ಆಯೋಗವು ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಮಂಗಳವಾರ ನಡೆದ ಪ್ರತ್ಯೇಕ ಸಭೆಯಲ್ಲಿ ಹೇಳಿದರು.

ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾ ಧಿಕಾರಿ, ಬೂತ್ ಮಟ್ಟದ ಅಧಿಕಾರಿಗಳ ಮೇಲುಸ್ತುವಾರಿ ಹಾಗೂ ಬೂತ್ ಮಟ್ಟದ ಅಧಿಕಾರಿಗಳಿಗೆ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಕುರಿತಂತೆ ಅಗತ್ಯ ತರಬೇತಿ ನೀಡಲಾಗಿದೆ ಎಂದು ದಕ್ಷಿಣ ನಗರ ಪಾಲಿಕೆ ಆಯುಕ್ತ ಹಾಗೂ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್. ರಮೇಶ್ ತಿಳಿಸಿದರು.

ಮತದಾರರ ಪಟ್ಟಿಯ ಪರಿಷ್ಕರಣೆಗಾಗಿ ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಅರ್ಜಿ ವಿತರಿಸಿ, ಭರ್ತಿ ಮಾಡಿದ ಅರ್ಜಿಗಳನ್ನು ಸ್ಥಳದಲ್ಲೇ ಪಡೆಯುತ್ತಾರೆ ಎಂದರು.

ಎರಡು ತಿಂಗಳಲ್ಲಿ ಮ್ಯಾಪಿಂಗ್, ಅನ್ ಮ್ಯಾಪಿಂಗ್, ರಿ-ಮ್ಯಾಪಿಂಗ್ ಇತ್ಯಾದಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಪ್ರಾಮಾಣಿಕ ಪ್ರಯತ್ನ ಅಗತ್ಯ. ಈ ಕುರಿತಂತೆ ಬಿಎಲ್ಒಗಳು ಅಧಿಕೃತ ರಾಜಕೀಯ ಪಕ್ಷಗಳಿಂದ ನಿಯೋಜಿಸಲ್ಪಟ್ಟ ಮತಗಟ್ಟೆ ಏಜೆಂಟರ (ಬಿಎಲ್ಎ) ನೆರವು ಪಡೆದು, ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು. ಮತಗಟ್ಟೆಗಳಲ್ಲಿ ಬಿಎಲ್ಒಗಳಿಗೆ ಅಂತರ್ಜಾಲ ಇತ್ಯಾದಿ ಅಗತ್ಯ ಸೌಲಭ್ಯಗಳು ದೊರಕುವಂತೆ ಬಿಎಲ್ಒ ಸೂಪರ್ ವೈಸರ್ಗಳು, ಇಆರ್ಒ, ಎಇಆರ್ಒಗಳು ವ್ಯವಸ್ಥೆ ಮಾಡಬೇಕು ಎಂದು ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತ ಹಾಗೂ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದರು.

ಅರ್ಹ ಹೊಸ ಮತದಾರರನ್ನು ಪಟ್ಟಿಗೆ ಸೇರಿಸುವುದು, ದ್ವಿಪ್ರತಿ, ವರ್ಗಾವಣೆಗೊಂಡಿರುವ, ಮರಣ ಹೊಂದಿರುವ ಹಾಗೂ ಅನರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವುದು ಮತ್ತು ತಪ್ಪು ವಿವರಗಳನ್ನು ಸರಿಪಡಿಸಲು ನಿಗದಿತ ಅರ್ಜಿ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿದ ಅರ್ಜಿಗಳನ್ನು ಸ್ಥಳದಲ್ಲೇ ಸಂಗ್ರಹಿಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-4-1240734955

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.