ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಜೂನ್ 20ರಿಂದ ನಡೆಯುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಮಹೇಶ್ವರ್ ರಾವ್ ಸೂಚಿಸಿದರು.

ಜಿಬಿಎ ವ್ಯಾಪ್ತಿಯಲ್ಲಿ ನಡೆಸಲಾಗುವ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್ಐಆರ್) ಸಂಬಂಧಿಸಿದಂತೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಕೇಂದ್ರ, ಉತ್ತರ, ದಕ್ಷಿಣ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಎಸ್ಐಆರ್ ಕುರಿತಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಸಮರ್ಪಕವಾಗಿ ಮಾಡಿಕೊಂಡು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.

ತಮ್ಮ ವ್ಯಾಪ್ತಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಕೊರತೆಯಿದ್ದರೆ ಕೂಡಲೇ ನಿಯೋಜನೆ ಮಾಡಿಕೊಳ್ಳಬೇಕು. ಈವರೆಗೆ ಕರ್ತವ್ಯಕ್ಕೆ ಹಾಜರಾಗದ ಬಿಎಲ್ಒ ಗಳಿಗೆ ಕೂಡಲೇ ನೋಟಿಸ್ ಜಾರಿ ಮಾಡಬೇಕು. ನೋಟಿಸ್ಗೆ ಪ್ರತಿಕ್ರಿಯೆ ನೀಡದ ಬಿಎಲ್ಒಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಎಲ್ಲಾ ಬಿಎಲ್ಒಗಳು ಕರ್ತವ್ಯ ನಿರ್ವಹಣೆಯನ್ನು ಕಡ್ಡಾಯವಾಗಿ ಮಾಡುವ ಸಲುವಾಗಿ ನಿಯೋಜನೆಗೊಂಡಿರುವಂತಹ ವಿವಿಧ ಇಲಾಖಾ ಮುಖ್ಯಸ್ಥರಿಗೆ ಪತ್ರ ಕಳುಹಿಸಬೇಕು ಎಂದರು.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಕುರಿತಂತೆ ಪ್ರತಿದಿನ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು. ಎಲ್ಲಿಯೂ ಯಾವುದೇ ರೀತಿಯ ಲೋಪದೋಷಗಳಾಗದಂತೆ ಎಸ್ಐಆರ್ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಡೆಸಬೇಕು. ಎಲ್ಲಾ ಬೂತ್ ಮಟ್ಟದ ಅಧಿಕಾರಿಗಳು ಜೂನ್ 16ರ ಒಳಗಾಗಿ ಮತದಾರರ ಪೂರ್ವ ಮ್ಯಾಪಿಂಗ್ಗೆ ಸಂಬಂಧಿಸಿದಂತೆ ಶೇ 100 ರಷ್ಟು ಪ್ರಗತಿ ಸಾಧಿಸಬೇಕೆಂದು ಸೂಚಿಸಿದರು.

ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತೆ ಸುಷಮಾ ಗೋಡಬೋಲೆ, ಹೆಚ್ಛುವರಿ ಜಿಲ್ಲಾ ಚುನಾವಣಾಧಿಕಾರಿಗಳಾದ ಪೊಮ್ಮಲ ಸುನೀಲ್ ಕುಮಾರ್, ರಮೇಶ್, ಜಗದೀಶ್, ಕಂದಾಯ ಹೆಚ್ಚುವರಿ ಆಯುಕ್ತರಾದ ಕವಿತಾ, ರಂಗನಾಥ್, ಪಲ್ಲವಿ, ಸಹಾಯಕ ಆಯುಕ್ತ ಎಂ. ಶ್ರೀನಿವಾಸ, ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.