ಬೆಂಗಳೂರು: ವೃಷಭಾವತಿ ವ್ಯಾಲಿಯಲ್ಲಿ ಸರಾಗವಾಗಿ ನೀರು ಹರಿದುಹೋಗಲು ವೈಜ್ಞಾನಿಕ ಯೋಜನೆ ರೂಪಿಸುವಂತೆ ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ.ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ವಿಜಯನಗರ ವ್ಯಾಪ್ತಿಯಲ್ಲಿ ಕಾಮಗಾರಿಗಖ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಗಾಳಿ ಆಂಜನೇಯ ದೇವಸ್ಥಾನದ ಬಳಿ ವೃಷಭಾವತಿ ವ್ಯಾಲಿಯನ್ನು ಪರಿಶೀಲಿಸಿ ಹೂಳು, ತ್ಯಾಜ್ಯವನ್ನು ತೆರವುಗೊಳಿಸಬೇಕು. ಮಳೆ ನೀರು ಸರಾಗವಾಗಿ ಹರಿದುಹೋಗಲು ಅನುಕೂಲವಾಗುವಂತೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಮಳೆಗಾಲದ ವೇಳೆ ಗಾಳಿ ಆಂಜನೇಯ ದೇವಸ್ಥಾನದ ಬಳಿ ವೃಷಭಾವತಿ ವ್ಯಾಲಿಯಲ್ಲಿ ನೀರಿನ ಹರಿವಿನ ಮಟ್ಟ ಹೆಚ್ಚಾಗಿ ಜಲಾವೃತ ಆಗುವುದನ್ನು ತಪ್ಪಿಸಬೇಕು. ವ್ಯಾಲಿಯನ್ನು ನಿರಂತರವಾಗಿ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಜೊತೆಗೆ ವ್ಯಾಲಿಗೆ ತ್ಯಾಜ್ಯ ಹಾಕದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿದರು.

ಕವಿಕಾ ಫ್ಯಾಕ್ಟರಿ ಹಿಂಭಾಗ ವೃಷಭಾವತಿ ವ್ಯಾಲಿಯಲ್ಲಿ ಹೂಳೆತ್ತುವ ಕಾರ್ಯವನ್ನು ಪರಿವೀಕ್ಷಿಸಿ, ಮುಂಗಾರು ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ತ್ವರಿತವಾಗಿ ಕೆಲಸ ಪೂರ್ಣಗೊಳಿಸಲು ಹೇಳಿದರು.

ಮಳೆಗಾಲದ ವೇಳೆ ಗಾಳಿ ಆಂಜನೇಯ ದೇವಸ್ಥಾನ, ಕವಿಕಾ ಹಾಗೂ ನಾಯಂಡಹಳ್ಳಿ ಜಂಕ್ಷನ್ ಭಾಗದಲ್ಲಿ ಜಲಾವೃತ ಆಗುವುದನ್ನು ತಪ್ಪಿಸುವ ಸಲುವಾಗಿ ಹೆಚ್ಚುವರಿ ಯಂತ್ರೋಪಕರಣಗಳನ್ನು ಬಳಸಿಕೊಂಡು ನಿರಂತರವಾಗಿ ಸ್ವಚ್ಛತಾ ಕಾರ್ಯ ನಡೆಸಬೇಕು. ಅಗತ್ಯವಿದ್ದಲ್ಲಿ ಸ್ವಚ್ಛತೆಗಾಗಿ ಹೆಚ್ಚುವರಿ ತಂಡಗಳನ್ನು ನಿಯೋಜಿಸಿಕೊಳ್ಳಲು ಸೂಚನೆ ನೀಡಿದರು.

ಗಾಳಿ ಆಂಜನೇಯ ದೇವಸ್ಥಾನದ ಬಳಿ ರಸ್ತೆಯ ಭಾಗ ಜಲಾವೃತ ಆಗುವುದನ್ನು ತಪ್ಪಿಸುವ ಸಲುವಾಗಿ ತಾತ್ಕಾಲಿಕವಾಗಿ ‘ಕ್ಯಾಚ್ಮೆಂಟ್ ಪಿಟ್’ ಸ್ಥಾಪಿಸಿಕೊಂಡು, ಅಗತ್ಯ ಸಾಮರ್ಥ್ಯದ ಸಬ್ಮರ್ಸಿಬಲ್ ಪಂಪ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ರಾಷ್ಟ್ರೀಯ ವಿಪತ್ತು ನಿರ್ವಹಣೆ ನಿಧಿ (ಎನ್ಡಿಆರ್ಎಂಎಫ್) ಯೋಜನೆಯಡಿ, ಕೈಗೆತ್ತಿಕೊಂಡಿರುವಂತಹ ಮಳೆ ನೀರುಗಾಲುವೆ ಕಾಮಗಾರಿಗಳನ್ನು ಮಳೆಗಾಲ ಪ್ರಾರಂಭ ಆಗುವುದಕ್ಕೂ ಮುಂಚಿತವಾಗಿ ಪೂರ್ಣಗೊಳಿಸಲು ನಿರ್ದೇಶನ ನೀಡಿದರು.

ಗುಣಮಟ್ಟ ಕಾಪಾಡಿ: ಮೈಸೂರು ರಸ್ತೆ ನಾಯಂಡಹಳ್ಳಿ ಮೇಲ್ಸೇತುವೆ ಭಾಗದಲ್ಲಿ ಮಿಲ್ಲಿಂಗ್ ಮಾಡಿಕೊಂಡು ಡಾಂಬರೀಕರಣ ಹಾಕುವ ಕಾರ್ಯ ಪ್ರಗತಿ ಪರಿಶೀಲನೆ ನಡೆಸಿದರು. ಮೇಲ್ಸೇತುವೆ ಭಾಗದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಬೇಕು. ರಸ್ತೆ ಮಧ್ಯೆ ಭಾಗದಲ್ಲಿರುವ ಚರಂಡಿಯಲ್ಲಿ ಹೂಳೆತ್ತಿ ಸ್ಬಚ್ಛತೆ ಕಾಪಾಡಲು ಸೂಚನೆ ನೀಡಿದರು.

ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಕೈಗೆತ್ತಿಕೊಂಡಿರುವ ಡಾಂಬರೀಕರಣ ಕಾರ್ಯಗಳಿಗೆ ವೇಗ ನೀಡಿ, ಕಾಲಮಿತಿಯೊಳಗಾಗಿ ಪೂರ್ಣಗೊಳಿಸಲು ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯ ಎಂಜಿನಿಯರ್ಗಳಾದ ಬಸವರಾಜ್ ಕಬಾಡೆ, ರಾಜೇಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-14-1558342774

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.