ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹದಲ್ಲಿ ಆಟೊ ಟಿಪ್ಪರ್ಗಳ ಸ್ಕ್ಯಾನಿಂಗ್ ಸಮಯ ಬದಲಾವಣೆ ಮಾಡಿದ್ದರಿಂದ ಹಾಜರಾತಿಯಲ್ಲಿ ಶೇ 10ರಷ್ಟು ಹೆಚ್ಚಳವಾಗಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬಿಎಸ್ಡಬ್ಲ್ಯುಎಂಎಲ್) ಸಿಇಒ ಕರೀಗೌಡ ತಿಳಿಸಿದರು.

ಆಟೊ ಟಿಪ್ಪರ್ಗಳ ಸ್ಕ್ಯಾನಿಂಗ್ ಸಮಯವನ್ನು ಬೆಳಿಗ್ಗೆ 5.30ರಿಂದ 6.30 ರವರೆಗೆ ನಿಗದಿಪಡಿಸಲಾಗಿದೆ. 15 ದಿನಗಳಿಂದ ಬಿಎಸ್ಡಬ್ಲ್ಯುಎಂಎಲ್ನ ಎಲ್ಲ ಅಧಿಕಾರಿಗಳು ಪ್ರತಿನಿತ್ಯ ಬೆಳಿಗ್ಗೆ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಟಿಪ್ಪರ್ಗಳು, ಪೌರಕಾರ್ಮಿಕರ ಹಾಜರಾತಿ ಪ್ರಕ್ರಿಯೆಯನ್ನು ಪರಿಶೀಲಿಸುತ್ತಿದ್ದಾರೆ. ಹೀಗಾಗಿ, ಹಾಜರಾತಿ ಪ್ರಮಾಣ ಶೇ 95ಕ್ಕೆ ಏರಿದೆ. ಈ ಹಿಂದೆ ಈ ಪ್ರಮಾಣ ಶೇ 85ರಷ್ಟಿತ್ತು ಎಂದು ಮಾಹಿತಿ ನೀಡಿದರು.

ನಗರದಲ್ಲಿ 200 ಮಸ್ಟರಿಂಗ್ ಕೇಂದ್ರಗಳಿದ್ದು, ಬಿಎಸ್ಡಬ್ಲ್ಯುಎಂಎಲ್ನ ಸಿಇಒ, ಸಿಓಓ, ನಾಲ್ವರು ಡಿಜಿಎಂಗಳು, 28 ಎಜಿಎಂಗಳು, ಚೀಫ್ ಮಾರ್ಷಲ್ ಸೇರಿದಂತೆ ಎಲ್ಲ ಅಧಿಕಾರಿಗಳು ಪ್ರತಿನಿತ್ಯ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಆಟೊ ಟಿಪ್ಪರ್ಗಳು ಮನೆಗಳಿಂದ ಹಸಿ ಹಾಗೂ ಒಣಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಲು ಸೂಚನೆ ನೀಡಲಾಗುತ್ತಿದೆ. ಇದರಿಂದ ರಸ್ತೆ ಬದಿ ತ್ಯಾಜ್ಯ ಬಿಸಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಮತ್ತಷ್ಟು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಟ್ರ್ಯಾಕ್ ಡ್ಯೂಟಿ: ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವುದನ್ನು ಮೇಲ್ವಿಚಾರಣೆ ಮಾಡಲು ‘ಟ್ರ್ಯಾಕ್ ಡ್ಯೂಟಿ ತಂತ್ರಾಂಶ’ವನ್ನು ಅಭಿವೃದ್ಧಿಪಡಿಸಲಾಗಿದೆ. ಇದರಿಂದ ಎಲ್ಲಾ ಅಧಿಕಾರಿಗಳ ಹಾಜರಾತಿಯನ್ನು ಆನ್ಲೈನ್ ಮೂಲಕ ಪರಿಶೀಲಿಸಬಹುದಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.