ಶುಕ್ರವಾರ, ಡಿಸೆಂಬರ್ 6, 2019
20 °C

ಜಲಮಂಡಳಿಗೆ ಗುಣಮಟ್ಟ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಜಲಮಂಡಳಿಯು ಅಂತರರಾಷ್ಟ್ರೀಯ ಗುಣಮಟ್ಟ ಪ್ರಶಸ್ತಿಗೆ ಪಾತ್ರವಾಗಿದೆ. ಇಟಲಿಯ ರೋಮ್‌ನಲ್ಲಿ ಇತ್ತೀಚೆಗೆ ನಡೆದ ಗುಣಮಟ್ಟ ಶೃಂಗಸಭೆಯಲ್ಲಿ ಜಲಮಂಡಳಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 

ಬೆಂಗಳೂರು ಜಲ ಮಂಡಳಿಯು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದು, ಮಂಡಳಿಯ ಸಾಧನೆ, ಗುಣಮಟ್ಟ, ಕಾರ್ಯಕ್ಷಮತೆ, ಬದ್ಧತೆ, ಸೃಜನಶೀಲತೆ, ಪರಿಣಾಮಕಾರಿ ಕಾರ್ಯಗಳು ಹಾಗೂ ನವೀನ ತಂತ್ರಜ್ಞಾನದ ಅಳವಡಿಕೆ ಮತ್ತು ಇನ್ನಿತರ ಪ್ರಗತಿಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಮಂಡಳಿ ಪ್ರಕಟಣೆ ತಿಳಿಸಿದೆ.

ಪ್ರತಿಕ್ರಿಯಿಸಿ (+)