ಬೆಂಗಳೂರು: ಜಲಮಂಡಳಿಯಿಂದ ಹೊಸದಾಗಿ ನಿರ್ಮಿಸುತ್ತಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ
(ಎಸ್ಟಿಪಿ) ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ
ಬೆಂಗಳೂರು ಜಲಮಂಡಳಿ ಅಧ್ಯಕ್ಷ ವಿ. ರಾಮ್ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚಿಸಿದರು.

ಜಲಮಂಡಳಿಯ ವೃಷಭಾವತಿ ವ್ಯಾಲಿಯ(ವಿವಿ) 150 ಎಂಎಲ್ಡಿ ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕದ (ಎಸ್ಟಿಪಿ)ಯೋಜನೆ ಹಾಗೂ ಮೈಲಸಂದ್ರದಲ್ಲಿ ಉನ್ನತೀಕರಿಸಲಾಗುತ್ತಿರುವ ಎಸ್ಟಿಪಿ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು.

ಮೈಲಸಂದ್ರ ಎಸ್ಟಿಪಿ ಕಾಮಗಾರಿ ಪೂರ್ಣಗೊಳಿಸದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ‘ಡಿಸೆಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಬೇಕು’ ಎಂದರು. ವೃಷಭಾವತಿ ವ್ಯಾಲಿ ಯೋಜನೆಯ ಕಾಮಗಾರಿಯನ್ನು 2026ರ ಮಾರ್ಚ್ ವೇಳೆಗೆ ಪೂರ್ಣಗೊಳಿಸುವಂತೆ ನಿರ್ದೇಶಿಸಿದರು.

ಇದೇ ವೇಳೆ ಈ ಎರಡೂ ಸ್ಥಳಗಳಲ್ಲಿ ಅಧ್ಯಕ್ಷರು ಸೇರಿದಂತೆ ಜಲ
ಮಂಡಳಿ ಸಿಬ್ಬಂದಿ 350 ಗಿಡಗಳನ್ನು ನೆಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.