ಬೆಂಗಳೂರು: ‘ಬೇಸಿಗೆಯಲ್ಲಿ ನಗರದಲ್ಲಿ ನೀರಿನ ಕೊರತೆ ಉಂಟಾಗದ ಹಾಗೆ ಕ್ರಮ ಕೈಗೊಳ್ಳಬೇಕು’ ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಸೂಚನೆ ನೀಡಿದರು.

ಜಲಮಂಡಳಿ ಕೇಂದ್ರ ಕಛೇರಿಯಲ್ಲಿ ಪರಿಶೀಲನಾ ಸಭೆ ನಡೆಸಿದ ಅವರು, ’ನಗರದ ಯಾವುದೇ ಭಾಗದಲ್ಲೂ ನೀರಿನ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣ ಜಾರಿಗೆ ತರಬೇಕು’ ಎಂದರು.

‘ಭಾರತೀಯ ವಿಜ್ಞಾನ ಸಂಸ್ಥೆ ನೀಡಿದ ವರದಿಯ ಪ್ರಕಾರ ನಗರದ ಹೊರವಲಯ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಕುಸಿಯುವ ಸಾಧ್ಯತೆ ಇದೆ. ಪ್ರತಿ ವಾರ್ಡ್ಗೆ ಪ್ರತ್ಯೇಕ ಎಂಜಿನಿಯರ್ ಅನ್ನು ನಿಯೋಜಿಸಿ ಪರಿಸ್ಥಿತಿ ಗಂಭೀರವಾಗುವ ಮೊದಲು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

‘ಬೇಸಿಗೆ ತೀವ್ರಗೊಳ್ಳುವ ಮುನ್ನ ಹೊಸ ನೀರು ಸಂಪರ್ಕಗಳ ಪ್ರಕ್ರಿಯೆ ವೇಗಗೊಳಿಸಿ, ಅಗತ್ಯ ಮೂಲಸೌಕರ್ಯವನ್ನು ಸಿದ್ಧಪಡಿಸಬೇಕು. ನಗರದಾದ್ಯಂತ ಇರುವ ಶುದ್ದ ನೀರಿನ ಘಟಕಗಳು ಕಾರ್ಯನಿರ್ವಹಿಸುವಂತೆ ತಕ್ಷಣ ದುರಸ್ತಿ ಮತ್ತು ಮೇಲ್ವಿಚಾರಣೆ ಮಾಡಬೇಕು ಎಂದು ಹೇಳಿದರು.

ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್, ಪ್ರಧಾನ ಮುಖ್ಯ ಎಂಜಿನಿಯರ್, ವಲಯಗಳ ಎಂಜಿನಿಯರ್ಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.