ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Bengaluru Weather: ಬೆಂಗಳೂರು ನಗರದಲ್ಲಿ ಹೆಚ್ಚಿದ ತಾಪಮಾನ

Published 30 ಮೇ 2024, 15:49 IST
Last Updated 30 ಮೇ 2024, 15:49 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ತಿಂಗಳ ಕೆಲವು ದಿನಗಳು ಸುರಿದ ಮಳೆ, ಮೋಡ ಕವಿದ ವಾತಾವರಣದಿಂದಾಗಿ ದಿನದ ಕೆಲವು ಅವಧಿ ತಾಪಮಾನ ಮತ್ತೆ ಹೆಚ್ಚಳವಾಗುತ್ತಿದೆ.

ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಮಳೆಯ ಅಭಾವದಿಂದಾಗಿ ನಗರದಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿತ್ತು. ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪಿದರೆ, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿತ್ತು. ಇದರಿಂದಾಗಿ ನಗರದ ಜನರು ಹೈರಾಣಗೊಂಡಿದ್ದರು. ಈ ತಿಂಗಳ ಎರಡನೇ ವಾರದಲ್ಲಿ ಎಡಬಿಡದೆ ಸುರಿದ ಮಳೆಯಿಂದಾಗಿ ನಗರದಲ್ಲಿ ತಂಪನೆಯ ವಾತಾವರಣ ನಿರ್ಮಾಣವಾಗಿತ್ತು. ಸಂಜೆಯ ಅವಧಿಯಲ್ಲಿ ಚಳಿ ಕಾಣಿಸಿಕೊಂಡಿತ್ತು. ಕಳೆದೊಂದು ವಾರದಿಂದ ಮೋಡ–ಬಿಸಿಲಿನ ವಾತಾವರಣದಿಂದಾಗಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ವರದಿಯಾಗುತ್ತಿದೆ. 

ಹವಾಮಾನ ಇಲಾಖೆಯ ಪ್ರಕಾರ ನಗರದಲ್ಲಿ ಮುಂದಿನ ನಾಲ್ಕು ದಿನಗಳು ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 32ರಿಂದ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22ರಿಂದ 23 ಡಿಗ್ರಿ ಸೆಲ್ಸಿಯಸ್ ಇರುವ ಸಂಭವವಿದೆ ಎಂದು ಇಲಾಖೆ ಹೇಳಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT