ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ: ಏಳು ವರ್ಷಗಳಲ್ಲಿ ಅಧಿಕ

Published 28 ಮಾರ್ಚ್ 2024, 15:36 IST
Last Updated 28 ಮಾರ್ಚ್ 2024, 15:36 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ವಾತಾವರಣದಲ್ಲಿ ಉಷ್ಣತೆ ಹೆಚ್ಚಳವಾಗುತ್ತಿದ್ದು, ಗುರುವಾರ (ಮಾ.28) ಗರಿಷ್ಠ ತಾಪಮಾನ 37.9 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಇದು ಕಳೆದ ಏಳು ವರ್ಷಗಳಲ್ಲಿ ಈ ದಿನ ವರದಿಯಾದ ಗರಿಷ್ಠ ತಾಪಮಾನವಾಗಿದೆ. 

ಈ ತಿಂಗಳು ನಗರದ ತಾಪಮಾನದಲ್ಲಿ ಭಾರಿ ಹೆಚ್ಚಳವಾಗಿದ್ದು, ಕಳೆದೊಂದು ವಾರದಿಂದ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಮುಂದಿನ ನಾಲ್ಕು ದಿನಗಳು ಸಹ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಇಷ್ಟೇ ‍ಪ್ರಮಾಣದಲ್ಲಿ ಇರುವ ಸಾಧ್ಯತೆಯಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರದ ಪ್ರಕಾರ 2017ರ ಮಾ.28ರಂದು 37.4 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ವರದಿಯಾಗಿತ್ತು. 2018ರಲ್ಲಿ ಈ ದಿನ 36.6 ಡಿಗ್ರಿ ಸೆಲ್ಸಿಯಸ್‌, 2019ರಲ್ಲಿ 37.5 ಡಿಗ್ರಿ ಸೆಲ್ಸಿಯಸ್‌, 2020ರಲ್ಲಿ 37.1 ಡಿಗ್ರಿ ಸೆಲ್ಸಿಯಸ್‌, 2021ರಲ್ಲಿ 37.4 ಡಿಗ್ರಿ ಸೆಲ್ಸಿಯಸ್‌, 2022ರಲ್ಲಿ 36.7 ಡಿಗ್ರಿ ಸೆಲ್ಸಿಯಸ್‌ ಹಾಗೂ 2023ರಲ್ಲಿ 36.9 ಡಿಗ್ರಿ ಸೆಲ್ಸಿಯಸ್‌ ವರದಿಯಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT