ಬೆಂಗಳೂರು: ಪತಿಯ ಆನ್ಲೈನ್ ಬೆಟ್ಟಿಂಗ್, ಮದ್ಯಪಾನದ ಚಟದಿಂದ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕನಗಾ(28) ಆತ್ಮಹತ್ಯೆ ಮಾಡಿಕೊಂಡವರು. ಕನಗಾ ಅವರ ಸಹೋದರಿ ನೀಡಿದ ದೂರಿನ ಮೇರೆಗೆ ಪತಿ ಶಂಕರ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದ ಅಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಎ.ನಾರಾಯಣಪುರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಕನಗಾ ಅವರು ಪತಿಯ ಜತೆಗೆ ಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ದಂಪತಿಯ ನಡುವೆ ಜಗಳವಾಗಿತ್ತು. ಇದರಿಂದ ಬೇಸತ್ತು ಕನಗಾ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

‘2023ರಲ್ಲಿ ತಮಿಳುನಾಡಿನ ಶಂಕರ್ ಜತೆಗೆ ಕನಗಾ ಮದುವೆಯಾಗಿತ್ತು. ದಂಪತಿಗೆ ಎರಡು ವರ್ಷದ ಗಂಡು ಮಗುವಿದೆ. ಮೊದಲ ಎರಡು ವರ್ಷ ತಮಿಳುನಾಡಿನ ಪತಿಯ ಮನೆಯಲ್ಲಿ ಕನಗಾ ವಾಸವಿದ್ದರು. ಶಂಕರ್ ಅವರು ಆನ್ಲೈನ್ ಬೆಟ್ಟಿಂಗ್, ಮದ್ಯ ಸೇವಿಸಲು ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಸಾಧ್ಯವಾಗದೇ ಪತ್ನಿಯೊಂದಿಗೆ ನಿತ್ಯ ಗಲಾಟೆ ಮಾಡುತ್ತಿದ್ದರು’ ಎಂದು ಮೂಲಗಳು ಹೇಳಿವೆ.

‘ಗಲಾಟೆ ವಿಷಯವು ಕನಗಾ ಕುಟುಂಬದವರಿಗೆ ಗೊತ್ತಾಗಿತ್ತು. ಅವರನ್ನು ಬೆಂಗಳೂರಿಗೆ ಕರೆಸಿಕೊಂಡು ಎ.ನಾರಾಯಣಪುರದಲ್ಲಿ ಬಾಡಿಗೆ ಮನೆ ಮಾಡಿಕೊಟ್ಟಿದ್ದರು. ಕೆಲವು ದಿನ ಕಳೆದ ಮೇಲೆ ಶಂಕರ್ ಸಹ ಬೆಂಗಳೂರಿಗೆ ಬಂದಿದ್ದರು. ಮನೆಯಲ್ಲಿ ಗಲಾಟೆ ನಡೆದು, ಬೇಸತ್ತು ಕನಗಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮೂಲಗಳು ಹೇಳಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-4-917886329

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.