ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಪಾರ್ಕ್‌ನಲ್ಲಿದ್ದ ಯುವತಿ ಎಳೆದೊಯ್ದು ಅತ್ಯಾಚಾರ, ನಾಲ್ವರ ಬಂಧನ

Last Updated 31 ಮಾರ್ಚ್ 2023, 10:46 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ನಗರದಲ್ಲಿ ಚಲಿಸುವ ಕಾರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ವೆಸಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕೋರಮಂಗಲ ಪೊಲೀಸರು ತಿಳಿಸಿದ್ದಾರೆ.

ಮಾರ್ಚ್ 25ರಂದು ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ ಪಾರ್ಕ್‌ನಲ್ಲಿ ಯುವತಿ, ಸ್ನೇಹಿತನನ್ನು ಭೇಟಿಯಾಗಿ, ಮಾತುಕತೆಯಲ್ಲಿ ತೊಡಗಿದ್ದರು. ಇದೇ ವೇಳೆ ತಡರಾತ್ರಿ ಇಬ್ಬರೂ ಪಾರ್ಕ್‌ನಲ್ಲಿ ಕುಳಿತಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಆರೋಪಿಗಳು, ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಯುವತಿಯನ್ನು ಎಳೆದೊಯ್ದಿದ್ದರು. ನಂತರ, ಕಾರಿನಲ್ಲಿ ಹಲವೆಡೆ ಸುತ್ತಾಡಿಸಿದ್ದರು. ಚಲಿಸುತ್ತಿದ್ದ ಕಾರಿನಲ್ಲೇ ಆರೋಪಿಗಳು ಅತ್ಯಾಚಾರ ಮಾಡಿರುವುದಾಗಿ ಯುವತಿ ದೂರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರದ ಬಳಿಕ ಆರೋಪಿಗಳು ಸಂತ್ರಸ್ತೆಯನ್ನು ಮನೆ ಬಳಿ ಬಿಟ್ಟು ಹೋಗಿದ್ದರು. ಸಂತ್ರಸ್ತೆಯು ಕೋರಮಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸತೀಶ್, ವಿಜಯ್, ಶ್ರೀಧರ್ ಹಾಗೂ ಕಿರಣ್ ಗುರುತಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT