ಬೆಂಗಳೂರು: ಯಲಹಂಕದ ಬೆಳ್ಳಹಳ್ಳಿ ಮತ್ತು ಹೆಬ್ಬಾಳದಲ್ಲಿ ತಲಾ 125 ಹಾಸಿಗೆಗಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ ಆರೋಗ್ಯ ಇಲಾಖೆ ಅನುಮೋದನೆ ನೀಡಿದೆ.

ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ ₹150 ಕೋಟಿ ವೆಚ್ಚದಲ್ಲಿ 200 ಹಾಸಿಗೆಗಳ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ರಾಜ್ಯ ಸರ್ಕಾರ 2025–26ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿತ್ತು. ಈ ಆಸ್ಪತ್ರೆಯ ಬದಲು, ಇದೇ ಅನುದಾನದಲ್ಲಿ ಎರಡು ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ತಲಾ ₹75 ಕೋಟಿ ಹಂಚಿಕೆ ಮಾಡಲಾಗಿದೆ.

ಬೆಳ್ಳಹಳ್ಳಿಯಲ್ಲಿ 5 ಎಕರೆ ಜಮೀನು ಗುರುತಿಸಲಾಗಿದೆ. ಹೆಬ್ಬಾಳದಲ್ಲಿ ಪಶುಸಂಗೋಪನೆ ಮತ್ತು ಕೃಷಿ ಇಲಾಖೆ ಆವರಣದಲ್ಲಿ 4 ಎಕರೆ ಜಮೀನು ಗುರುತಿಸಲಾಗಿದ್ದು, ಇಲ್ಲಿ ಆಸ್ಪತ್ರೆ ನಿರ್ಮಿಸಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ₹20 ಕೋಟಿ ಅನುದಾನದಲ್ಲಿ ಈ ಕಾಮಗಾರಿ ಕೈಗೊಳ್ಳುವಂತೆ ತಿಳಿಸಲಾಗಿದೆ.

ಈ ಮೊದಲು ಬಜೆಟ್ ಘೋಷಣೆ ಅನುಸಾರ, 200 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಬೆಂಗಳೂರು ಉತ್ತರ ತಾಲ್ಲೂಕಿನ ಜಾಲ ಹೋಬಳಿಯ ಉತ್ತನಹಳ್ಳಿ ಗ್ರಾಮದಲ್ಲಿ 7 ಎಕರೆ ಸರ್ಕಾರಿ ಜಮೀನನ್ನು ಕಾಯ್ದಿರಿಸಲಾಗಿತ್ತು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಎರಡು ಪ್ರತ್ಯೇಕ ಆಸ್ಪತ್ರೆ ನಿರ್ಮಾಣದ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಿದ್ದರು. ಈ ಪ್ರಸ್ತಾವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದರಿಂದ ಎರಡು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತಿದೆ.

ಈ ಆಸ್ಪತ್ರೆಗಳು ಎರಡು ಮಹಡಿಗಳನ್ನು ಹೊಂದಿರಲಿವೆ. ಭವಿಷ್ಯದಲ್ಲಿ ಮತ್ತೆರಡು ಮಹಡಿಗಳನ್ನು ನಿರ್ಮಿಸಿ, ಹಾಸಿಗೆಗಳ ಸಂಖ್ಯೆಯನ್ನು 200ಕ್ಕೆ ಏರಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.